Belagavi NewsBelgaum News

*ವೈದ್ಯರ ನಿರ್ಲಕ್ಷಕ್ಕೆ ಮಗು ಸಾವು: ಆಸ್ಪತ್ರೆ ಮೇಲೆ ಸಂಬಂಧಿಕರ ದಾಳಿ; ಪರಿಕರಗಳನ್ನು ಒಡೆದು ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಚಿಕಿತ್ಸೆಗೆ ದಾಖಲಾಗಿದ್ದ ಮಗು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದೆ ಎಂದು ಆರೋಪಿಸಿ ಮಗುವಿನ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ, ಆಸ್ಪತ್ರೆಯ ಪರಿಕರಗಳನ್ನು ಒಡೆದುಹಾಕಿ ಆಕ್ರೋಶ ವ್ಯಕ್ತಪಡಿಸುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Home add -Advt

ಬೆಳಗಾವಿಯ ಗೋಕಾಕ್ ತಾಲೂಕಿನ ಬ್ಯಾಳಿಕಾಟಾ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶಿವಾನಂದ ನಿಂಗಪ್ಪ ಎಂಬುವವರ 7 ತಿಂಗಳ ಕಂದಮ್ಮ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಿದ್ದರು. ನಾಲ್ಕು ದಿನಗಳವರೆಗೆ ಚಿಕಿತ್ಸೆ ನೀಡಿದ್ದ ವೈದ್ಯರು ನಿನ್ನೆ ರಾತ್ರಿ ಆಂಬುಲೆನ್ಸ್ ತಂದು ಮಗುವನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ಇದೀಗ ಮಗು ಕೊನೆಯುಸಿರೆಳೆದಿದೆ.

ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದೇ ವೇಳೆ ಮಗುವಿನ ಸಂಬಂಧಿಕರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದು, ವೈದ್ಯರ ಬೇಜವಾಬ್ದಾರಿ, ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ಕಿಡಿಕಾರಿದ್ದು, ಆಸ್ಪತ್ರೆಯಲ್ಲಿನ ಪರಿಕರಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಗಾಕ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Related Articles

Back to top button