*ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ; ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ.
ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.
ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ