Kannada NewsKarnataka NewsNationalPolitics

*ಬಿಜೆಪಿಯಿಂದ ಸ್ಪರ್ಧಿಸಿ 2028 ಕ್ಕೆ ನಾನೆ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ : ಬಿಜೆಪಿ ಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ವೈ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಪರ ಲಿಂಗಾಯತರು ಇಲ್ಲ. ಜನರೇ ಹೊಸ ಪಕ್ಷ ಕಟ್ಟೋಕೆ ಸಲಹೆ ನೀಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಲ್ಲಿ ಮಾತಾಡಿದ ಅವರು, ಯುಗಾದಿ ಕಳೆದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ಅಂತ್ಯಗೊಳ್ಳಲಿದ್ದು ನನ್ನನ್ನು ಹೈಕಮ್ಯಾಂಡ್ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದು ಖಚಿತ ಎಂದು ನುಡಿದ ಯತ್ನಾಳ್, 2028 ಕ್ಕೆ ನಾನು ಸಿಎಂ ಆಗುವುದು ಪಕ್ಕಾ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ವಂಶ ರಾಜಕಾರಣ ಇದೆ. ನಿಜವಾದ ಕಾರ್ಯಕರ್ತರಿಗೆ ಬೆಲೆ ಇಲ್ಲ. ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ ಅಂತ ಬಾಂಬ್ ಸಿಡಿಸಿದ್ದಾರೆ.

ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ. ಯಾವ ವೀರಶೈವ ಲಿಂಗಾಯತರೂ ಯಡಿಯೂರಪ್ಪ ಜೊತೆಗಿಲ್ಲ. ಭ್ರಮೆಯಿಂದ ಕೇಂದ್ರದವರು ಹೊರಗೆ ಬರಬೇಕು. ರಾಮಾಯಣ, ಮಹಾಭಾರತದಲ್ಲೂ ಅಪಮಾನ ಮಾಡಿರೋದಿದೆ. ಹಾಗಾಗಿ ನನಗೆ ಯಾವ ಮುಜುಗರವೂ ಇಲ್ಲ. ಬಿಎಸ್‌ವೈ ಕುಟುಂಬವನ್ನು ನಾನು ಹೊರಗೆ ಇಡೋವರೆಗೂ ಬಿಡೋದಿಲ್ಲ ಅಂತ ಶಪಥ ಮಾಡಿದ್ದಾರೆ. ಯತ್ನಾಳ್ ಹೇಳಿಕೆ ಬಿಜೆಪಿಯಲ್ಲಿ ಹೊಸ ಸಂಚಲನ ಸೃಷ್ಟಿಮಾಡಿದೆ.

Home add -Advt

Related Articles

Back to top button