
ಪ್ರಗತಿವಾಹಿನಿ ಸುದ್ದಿ: ನಾನು ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವಂತೆ ಸಿದ್ದರಾಮಯ್ಯ ಹೇಳುತ್ತಾರೆ. ನನ್ನ ಕೊನೆ ಉಸಿರು ಇರುವವರೆಗೂ ಸಾರ್ವಜನಿಕ ಜೀವನದಲ್ಲಿ ಇರುತ್ತೇನೆ. ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ನಡೆಸುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ- ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಬಿಜೆಪಿ- ಜೆಡಿಎಸ್ ಒಗ್ಗೂಡಿದೆ. ಕಾಂಗ್ರೆಸ್ ಪಾಪಗಳು ಉತ್ತುಂಗಕ್ಕೇರಿದ್ದು, ರಾಜ್ಯದ ಜನ ನಿಮ್ಮನ್ನು ಆದಷ್ಟು ಬೇಗ ಮನೆಗೆ ಕಳುಹಿಸುತ್ತಾರೆ, ಧೈರ್ಯವಿದ್ದರೆ ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸಿ, ಶಕ್ತಿ ಪ್ರದರ್ಶನ ಮಾಡಿ. ಇಂದು ಚುನಾವಣೆ ನಡೆದರೆ ಬಿಜೆಪಿ ಮತ್ತು ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ