Election NewsKannada NewsKarnataka NewsNationalPolitics

*ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವದಿಲ್ಲ: ಡಿ.ಕೆ ಸುರೇಶ *

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಸಂಸದ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವು ನಿಲ್ಲುವುದಿಲ್ಲ ಎಂದು ಮಾಜಿ ಸಂಸದ ಡಿ.ಕೆ ಸುರೇಶ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಜನ ನನಗೆ ರೆಸ್ಟ್‌ ಕೊಟ್ಟಿದ್ದಾರೆ, ರೆಸ್ಟ್‌ ತೆಗೆದುಕೊಳ್ಳುತ್ತೇನೆ. ನಾನು ಚುನಾವಣೆಗೆ ನಿಲ್ಲುವುದು ಇದೆಲ್ಲವೂ ಮಾಧ್ಯಮಗಳ ಊಹಾಪೋಹವಷ್ಟೇ. ಚುನಾವಣೆ ಸೋಲಿನಿಂದ ನಾನು ಒತ್ತಡದಲ್ಲಿದ್ದೆ, ಸದ್ಯ ಅದರಿಂದ ಹೊರಗಡೆ ಬಂದಿದ್ದೇನೆ ಎಂದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ ಸುರೇಶ್ ಸ್ಪರ್ಧೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ನನ್ನ ಮುಂದೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌, ಮುಖ್ಯಮಂತ್ರಿ ಹಾಗೂ ಡಿಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

Home add -Advt

ಇನ್ನು, ಚನ್ನಪಟ್ಟಣದಿಂದ  ಡಿ.ಕೆ ಶಿವಕುಮಾರ್ ಅವರು ಸ್ಪರ್ಧಿಸುವ ಬಗ್ಗೆ ಮಾತನಾಡಿರುವ ಅವರು, ಡಿ.ಕೆ ಶಿವಕುಮಾರ ಸ್ಪರ್ಧಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಡಿಕೆಶಿ ಅವರು ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಿದ್ದಾರೆ. ಸೂಕ್ತ ಅಭ್ಯರ್ಥಿಯನ್ನ ನಮ್ಮ ಪಕ್ಷ ಕಣಕ್ಕಿಳಿಸುತ್ತೆ. ನಾನೂ ಕೂಡಾ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button