
ನಕಲಿ ಬೀಜ, ಗೊಬ್ಬರದ ಬಗ್ಗೆ ನಿಗಾ ವಹಿಸಿ – ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಾಗೂ ಪಿಕೆಪಿಎಸ್ ಮೂಲಕ ಗ್ರಾಮದ ರೈತರಿಗೆ ಸೋಯಾಬಿನ್ ಬೀಜಗಳನ್ನು ವಿತರಿಸಲಾಯಿತು.

ರೈತರು ಈಗಾಗಲೆ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಅವರು ಇನ್ನಷ್ಟು ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಬೇಕು. ಸರಿಯಾದ ಸಂದರ್ಭದಲ್ಲಿ ಅವರಿಗೆ ಸಾಮಗ್ರಿಗಳನ್ನು ಪೂರೈಸಬೇಕು. ಎಲ್ಲ ರೀತಿಯಿಂದಲೂ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ತಿಳಿಸಿದರು.


ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಅಡಿವೇಶ ಇಟಗಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಕಲ್ಯಾಣಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ