Latest

ಸಿಎಂ ಯಡಿಯೂರಪ್ಪ ಭೇಟಿಯಾದ ಜಲಸಂಪನ್ಮೂಲ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿ ಫೈನಲ್ ಮಾಡಿಲ್ಲ. ಈ ನಡುವೆ ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಮುನಿರತ್ನ ಹಾಗೂ ತುಳಸಿ ಮುನಿರಾಜು ನಡುವೆ ಭಾರಿ ಪೈಪೋಟಿ ನಡೆದಿದೆ.

ಇದೀಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆರ್.ಆರ್. ನಗರದಿಂದ ಮುನಿರತ್ನ ಅವರಿಗೆ ಟಿಕೆಟ್ ನೀಡುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸಿಎಂ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ಮುನಿರತ್ನ ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ಆರ್.ಆರ್ ನಗರ ಟಿಕೆಟ್ ನೀಡುವಂತೆ ಹೈಕಮಾಂಡ್ ಜೊತೆ ಮಾತುಕತೆ ನಡೆಸುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದಿಬಂದಿದೆ.

Related Articles

Back to top button