*BREAKING: ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ: ಐವರು ಯೋಧರು ಹುತಾತ್ಮ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ವಾಯುಪಡೆಯ ಎ ಎನ್-32 ಸಾರಿಗೆ ವಿಮಾನ ಪತನಗೊಂಡು ಬೆಂಕಿಗಾಹುತಿಯಾಗಿರುವ ಘಟನೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಅಸ್ಸಾಂನ ಜೋರ್ಹತ್ ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗುವ ವೇಳೆ ಏಕಾಏಕಿ ವಿಮಾನ ಪತನಗೊಂಡು ಬೆಂಕಿಗಾಹುತಿಯಾಗಿದೆ. ಈ ದುರಂತದಲ್ಲಿ ಐವರು ಯೋಧರು ಸಾವನ್ನಪ್ಪಿದ್ದಾರೆ. ಓರ್ವ ಸಹಪೈಲಟ್ ಬದುಕುಳಿದಿದ್ದಾಅರೆ. ವಾಯುಪಡೆ ನಿಲ್ದಾಣದ ಆವರಣದಲ್ಲಿಯೇ ವಿಮಾನ ಪತನಗೊಂಡಿದೆ. ವಿಮಾನ ಪತನಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ದುರಂತದಲ್ಲಿ ಐವರು ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ. … Continue reading *BREAKING: ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ: ಐವರು ಯೋಧರು ಹುತಾತ್ಮ*