*ಭಾರತೀಯ ವಾಯುಸೇನೆಗೆ ಸೇರಿದ ವಿಮಾನ ಪತನ: ಬೆಂಕಿಗಾಹುತಿ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ವಾಯುಪಡೆಯ ಎ ಎನ್-32 ಸಾರಿಗೆ ವಿಮಾನ ಪತನಗೊಂಡು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಅಸ್ಸಾಂನ ಜೋರ್ಹತ್ ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ವಾಯುಪಡೆ ನಿಲ್ದಾಣದ ಆವರಣದಲ್ಲಿಯೇ ವಿಮಾನ ಪತನಗೊಂಡಿದೆ. ಬಳಿಕ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ರಕ್ಷಣಾ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಯಾವುದೆ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.Home add -Advt
Copy and paste this URL into your WordPress site to embed
Copy and paste this code into your site to embed