ಪ್ರಗತಿವಾಹಿನಿ ಸುದ್ದಿ: ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಭಾಭರತೀಯ ವಾಯುಪಡೆ ವಿಮಾನ ಪತನವಾಗಿದೆ. ಐಎ ಎಫ್ ನ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ಸೇನೆ ತನಿಖೆಗೆ ಆದೇಶ ನೀಡಿದೆ. ಇದೇ ಮೊದಲ ಬಾರಿಗೆ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ