ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ; ಬಿಮ್ಸ್ ಗೆ ಐಎಎಸ್ ಆಡಳಿತಾಧಿಕಾರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು. ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಿಲ್ ಬಾಕಿಯನ್ನು ಶೀಘ್ರ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದೂ ಯಡಿಯೂರಪ್ಪ ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅವರು ಜಿಲ್ಲೆಯ ಕೊರೋನಾ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ.
ಸಚಿವರಾದ ಬಸವರಾಜ ಬೊಮ್ಮಾಯಿ, ಸುಧಾಕರ, ಗೋವಿಂದ ಕಾರಜೋಳ ಮೊದಲಾದವರು ಯಡಿಯೂರಪ್ಪ ಜೊತೆಗೆ ಆಗಮಿಸಿದ್ದಾರೆ.
ಬೆಳಗಾವಿಯಲ್ಲಿ ನಾಳೆ ಹರಿಬಾವು ವಝೆ ಭೇಟಿ ಮಾಡಲಿರುವ ಯಡಿಯೂರಪ್ಪ
ಬಿಮ್ಸ್ ಗೆ ಚಿಕಿತ್ಸೆ ನೀಡಲು ಇಂದು ಬೆಳಗಾವಿಗೆ ಯಡಿಯೂರಪ್ಪ
ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಎರಡೇ ದಿನ ಪರೀಕ್ಷೆ; 2nd ಪಿಯು ಪರೀಕ್ಷೆ ರದ್ದು



