ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎ ಎಸ್ ಅಧಿಕಾರಿ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು ನಗರ ಡಿಸಿ ಆಗಿದ್ದಾಗ ಜೆ.ಮಂಜುನಾಥ್ ಕಚೇರಿಯಲ್ಲಿಯೇ ಆಪ್ತನಿಂದ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಇದೇ ಪ್ರಕರಣ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಇತ್ತೀಚೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮ್ಯಾನೇಜರ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು.
ಭ್ರಷ್ಟಾಚಾರ ಪ್ರಕರಣ ವಿಚಾರಣೆ ಹಂತದಲ್ಲಿದ್ದಾಗಲೇ ಡಿಸಿ ಆಗಿದ್ದ ಜೆ.ಮಂಜುನಾಥ್ ಮಕ್ಕಳ ರಕ್ಷಣಾ ಆಯೋಗದ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದರು. ಎಸಿಬಿ ಕಲೆಕ್ಷನ್ ಸೆಂಟರ್ ಆಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವರಿಗೂ ಬಿ ರಿಪೋರ್ಟ್ ನೀಡುತ್ತಿದೆ ಎಂದು ಕಳೆದ ವಾರ ಹೈಕೋರ್ಟ್ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಎಸಿಬಿ ಡಿವೈ ಎಸ್ ಪಿ ರವಿಶಂಕರ್ ನೇತೃತ್ವದ ತಂಡ ಇದೀಗ ಜೆ.ಮಂಜುನಾಥ್ ಅವರ ಯಶವಂತಪುರ ನಿವಾಸದ ಮೇಲೆ ದಾಳಿ ನಡೆಸಿ ಮಂಜುನಾಥ್ ಅವರನ್ನು ಬಂಧಿಸಿದೆ.
ADGP ಅಮೃತ್ ಪೌಲ್ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ