
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಹಿರಿಯ ಐಎ ಎಸ್ ಅಧಿಕಾರಿ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್ ಅವರ ಆರ್.ಟಿ.ನಗರದ ಮನೆ ಮೇಲೆ ದಾಳಿ ನಡೆದಿದೆ. ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇನ್ನು ಬೆಂಗಳೂರು ಟೌನ್ ಹಾಗೂ ರೂರಲ್ ಪ್ಲಾನಿಂಗ್ ಆಫೀಸರ್ ಮಾರುತಿ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.