Latest

ಐಎಎಸ್ ಅಧಿಕಾರಿ ಹೆಸರಲ್ಲಿ ಅಸಂಬದ್ಧ ಸಂದೇಶ; ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎ ಎಸ್ ಅಧಿಕಾರಿ ರಾಕೇಶ್ ಸಿಂಗ್ ಹೆಸರು ದುರ್ಬಳಕೆ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ನಗರಾಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ದೂರು ದಾಖಲಿಸಿದ್ದಾರೆ.

ರಾಕೇಶ್ ಸಿಂಗ್ ಹೆಸರಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಗೆ ಅಸಂಬದ್ಧ ಸಂದೇಶ ರವಾನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಐಎ ಎಸ್ ಅಧಿಕಾರಿಗೆ ವಿಶೇಷ ಆಯುಕ್ತ ಹರೀಶ್ ಮಾಹಿತಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಹೆಸರು, ಫೋಟೋ ದುರುಪಯೋಗ ಪಡಿಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಕೇಶ್ ಸಿಂಗ್ ದೂರು ನೀಡಿದ್ದಾರೆ.
ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ವೈರಲ್; ವಿಶ್ವವಿದ್ಯಾಲಯದಲ್ಲಿ ತೀವ್ರಗೊಂಡ ಪ್ರತಿಭಟನೆ; ಓರ್ವ ಅರೆಸ್ಟ್

https://pragati.taskdun.com/latest/girls-hostelprivate-videos-leakedchandigarh-universitystudents-protest/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button