Kannada NewsLatestNational
*ಮಹಿಳಾ ಐಎಎಸ್ ಅಧಿಕಾರಿ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ: ನಾಲ್ಕು ಯುವತಿಯರ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಐವರು*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿಯೇ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಪೊಲೀಸರು ಮಹಿಳಾ ಐಎಎಸ್ ಅಧಿಕಾರೊಬ್ಬರ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಚಟುವಟಿಕೆಯನ್ನು ಬೇಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರು ಹಾಗೂ ಐವರು ಪುರುಷರನ್ನು ಬಂಧಿಸಿದ್ದಾರೆ.
ವರದಿಗಳ ಪ್ರಕಾರ ಮಹಿಳಾ ಅಧಿಕಾರಿ ಈ ಮನೆಯನ್ನು ಬಾಡಿಗೆಗೆ ನೀಡಿದ್ದರು. ಬಾಡಿಗೆದಾರ ಸುಮಾರು ಮೂರು ತಿಂಗಳಿಂದ ಈ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.




