Latest

64,553 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕು ದೇಶಾದ್ಯಂತ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 64, 553 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 1,007 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 48,040ಕ್ಕೆ ಏರಿಕೆಯಾಗಿದೆ.

Home add -Advt

ಸೋಂಕಿತರ ಸಂಖ್ಯೆಯಲ್ಲಿ 6,61,595 ಸಕ್ರಿಯ ಪ್ರಕರಣಗಳಿದ್ದು, 17,51,556 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 8,48,728 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 2,76,94,416 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

 

Related Articles

Back to top button