Kannada NewsKarnataka NewsLatest

*ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಏರ್ ಪೋರ್ಟ್ ನಲ್ಲಿ ನಿಗೂಢವಾಗಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ನಡೆದಿದೆ.

ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೂರು ದಿನಗಳ ಹಿಂದೆ ಜ್ಞಾನೇಂದ್ರ ಕುಮಾರ್ ದೆಹಲಿಗೆ ಹೋಗಿ ಬರುವುದಾಗಿ ಹೇಳಿ ಬೆಂಗಳೂರು ಏರ್ ಪೋರ್ಟ್ ಗೆ ಬಂದಿದ್ದರು. ಹೀಗೆ ವಿಮಾನ ನಿಲ್ದಾಣಕ್ಕೆ ಬಂದವರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.

ಈ ಹಿಂದೆ ಕೆಪಿಎಸ್ ಸಿಯಲ್ಲಿ ಜ್ಞಾನೇಂದ್ರ ಕುಮಾರ್ ಕಾರ್ಯನಿರ್ವಹಿಸಿದ್ದರು. ಸದ್ಯ MSME ಎಂಡಿಯಾಗಿ ಕಾಅರ್ಯನಿರ್ವಹಿಸುತ್ತಿದ್ದಾರೆ. ಕೆಪಿಎಸ್ ಸಿ ಹಗರಣ ಇದೀಗ ಭಾರಿ ಸುದ್ದಿಯಾದ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಆದರೆ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಬಗ್ಗೆ ಅವರ ಕುಟುಂಬ ಈವರೆಗೂ ಯಾವುದೇ ದೂರು ನೀಡಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button