
ಪ್ರಗತಿವಾಹಿನಿ ಸುದ್ದಿ: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಡಾ.ತ್ರಿಲೋಕ್ ಚಂದ್ರ ಕೆ.ವಿ ಅವರನ್ನು ಬೆಂಗಳೂರು ಪ್ರವಾಸೋದ್ಯಮ ಇಲಾಖೆ ಸಕ್ರೆಟರಿಯಾಗಿ ವರ್ಗಾವಣೆ ಮಾಡಲಾಗಿದೆ.
ಶಿವಕುಮಾರ್ ಕೆ.ವಿ ಅವರನ್ನು ಬಿಎಂಟಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಲಾಗಿದೆ.
ಸುರಲ್ಕರ್ ವಿಕಾಸ್ ಕಿಶೋರ್ – ಅವರನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಜಿಬಿಎ ಆರೋಗ್ಯ ಮತ್ತು ಶಿಕ್ಷಣ ವಿಶೇಷ ಆಯುಕ್ತರ ಜವಾಬ್ದಾರಿಯನ್ನೂ ವಹಿಸಲಾಗಿದೆ.