
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಪ್ರಮುಖ ಅಧಿಕಾರಿಗಳು:
ಮನೋಜ್ ಜೈನ್ (ಐಎಎಸ್, 2006 ಬ್ಯಾಚ್) ಅವರನ್ನು ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆಯ ಕಾರ್ಯದರ್ಶಿ- ಹುದ್ದೆಯಿಂದ ತಕ್ಷಣದಿಂದಲೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಡಾ. ತ್ರಿಲೋಕ್ ಚಂದ್ರ ಕೆ.ವಿ. (ಐಎಎಸ್, 2007 ಬ್ಯಾಚ್) ಅವರನ್ನು ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಮಂಜುಶ್ರೀ ಎನ್. (ಐಎಎಸ್, 2010 ಬ್ಯಾಚ್) ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.
ಮಂಜುನಾಥ್ ಜೆ. (ಐಎಎಸ್, 2010 ಬ್ಯಾಚ್) ಅವರನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಪೂರ್ಣಿಮಾ ಬಿ.ಆರ್. (ಐಎಎಸ್, 2016 ಬ್ಯಾಚ್) ಅವರನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಇದರ ಜೊತೆಗೆ, ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆಯ ಕಾರ್ಯದರ್ಶಿ-1 ಹಾಗೂ ಕಾರ್ಯದರ್ಶಿ-2 ಹುದ್ದೆಗಳನ್ನು ವಿಲೀನಗೊಳಿಸಿ ಒಂದೇ ಸರ್ಕಾರದ ಕಾರ್ಯದರ್ಶಿ ಹುದ್ದೆಯಾಗಿ ಮರುರಚನೆ ಮಾಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಸೂಚನೆ ಹೊರಡಿಸಿದೆ.



