Latest

*ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಪ್ರಸ್ತುತ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

ರಾಜ್ಯ ಸರ್ಕಾರ 14 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಲವು ಕಂದಾಯ ಇಲಾಖೆಯ ಸ್ಥಳ ನಿರೀಕ್ಷಣೆಯಲ್ಲಿರುವ ಹಾಗೂ ಸ್ಥಳ ನಿರೀಕ್ಷಣೆಗೆ ಬರಲಿರುವ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಇತರೆ ಹುದ್ದೆಗಳಿಗೆ ವರ್ಗಾಯಿಸಿದ್ದು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ

 ಡಾ. ತ್ರಿಲೋಕ್ ಚಂದ್ರ ಕೆ. ವಿ. (ಕೆಎನ್: 2007), ಬಿ. ಬಿ. ಕಾವೇರಿ (ಕೆಎನ್: 2008), ಬಿ. ಬಿ. ಕಾವೇರಿ, ಸುಧೀರ್ ಕುಮಾರ್ ರೆಡ್ಡಿ ಸಿಹೆಚ್, ಐಪಿಎಸ್ (ಕೆಎನ್-2010) ರನ್ನು ವಿವಿಧ ಇಲಾಖೆಗಳಿಗೆ ವರ್ಗಾಯಿಸಲಾಗಿದೆ.

Home add -Advt

ಈ ಮುನ್ನವೇ ಕಳೆದ ವಾರದಿಂದ ಸರ್ಕಾರ ವಿವಿಧ ಇಲಾಖೆಗಳ ಅಧಿಕಾರಿಗಳಗಳನ್ನು ವರ್ಗಾವಣೆ ಮಾಡುತ್ತಿದೆ. ಪೊಲೀಸ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು ಜೊತೆಗೆ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು.

Related Articles

Back to top button