ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಮ್ ಸುತಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಇಂದು ಮುಂಜಾನೆ 6:30ಕ್ಕೆ ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಇಬ್ರಾಹಿಂ ಸುತಾರ್ ಹಿಂದೂ-ಮುಸ್ಲೀಂ ಭಾವೈಕ್ಯತೆಯ ಮೂರ್ತುಯಾಗಿದ್ದರು. ಪ್ರವಚನಕ್ಕೆ ಹೆಸರಾಗಿದ್ದರಲ್ಲದೇ ಬಸವಣ್ಣನ ಅನುಯಾಯಿಯಾಗಿದ್ದರು.
ಮುಂಜಾನೆ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗುತ್ತಿದ್ದಂತೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
1940 ಮೇ 10 ರಂದು ಜನಿಸಿದ್ದ ಇಬ್ರಾಹಿಂ ಸುತಾರ್, ಮೂರನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದಿದ್ದರು. ಕನ್ನಡದ ಕಬೀರ ಎಂದೇ ಖ್ಯಾತಿ ಪಡೆದಿದ್ದ ಅವರು ನೇಕಾರ ವೃತ್ತಿ ಮಾಡುತ್ತಾ ಕುರಾನ್ ಅಧ್ಯಯನ, ಭಗವದ್ಗೀತೆ ಅಧ್ಯಯನ ಮಾಡಿದ್ದರು. ನಂತರದ ದಿನಗಳಲ್ಲಿ ಪ್ರವಚನಗಳನ್ನು ಮಾಡುತ್ತಾ ಭಾವೈಕ್ಯತೆ ಪಾಠ ಸಾರಿದ್ದರು. ರಾಜ್ಯೋತ್ಸವ ಪ್ರಶಸ್ತಿಗೂ ಇಬ್ರಾಹಿಂ ಭಾಜನರಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ