*ICMR–SHINE 2026: ಯುವಮನಸ್ಸುಗಳಲ್ಲಿ ವೈಜ್ಞಾನಿಕ ಚಿಂತನೆ*

ICMR–SHINE 2026: ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಚಿಂತನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾಥಿ೯ಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳಸುವದು ಮತ್ತು ವೈಜ್ಙಾನಿಕ ಚಿಂತನೆಗಳನ್ನು ಬಿತ್ತುವ ನಿಟ್ಟಿನಲ್ಲಿ ಬೆಳಗಾವಿಯ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮತ್ತು ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ICMR–NITM) ಸಂಸ್ಥೆಯಲ್ಲಿ ಆಗಸ್ಟ್ 11 ಮತ್ತು 12, 2026ರಂದು ICMR–SHINE 2026 (Science & Health Innovation for the Nextgen Explorers) ಎರಡು ದಿನಗಳ ಮುಕ್ತ ಶಾಲಾ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಬೆಳಗಾವಿ ಹಾಗೂ ಸುತ್ತಮುತ್ತಲಿನ 13 ಶಾಲೆಗಳು ಮತ್ತು ಪಿಯು ಕಾಲೇಜುಗಳಿಂದ 1,100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ಜೈವಿಕ ವೈದ್ಯಕೀಯ ಸಂಶೋಧನೆ, ಆರೋಗ್ಯ ವಿಜ್ಞಾನ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಬಗ್ಗೆ ಪ್ರಾಯೋಗಿಕ ಅನುಭವವನ್ನು ಪಡೆಯುವ ಅವಕಾಶ ದೊರೆಯಿತು.
ವಿದ್ಯಾರ್ಥಿಗಳು ಸಂಸ್ಥೆಯ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿ, ಪ್ರಾಯೋಗಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ವೈಜ್ಞಾನಿಕ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಹಾಗೂ ವಿಜ್ಞಾನಿಗಳು ಮತ್ತು ಸಂಶೋಧಕರೊಂದಿಗೆ ಸಂವಾದ ನಡೆಸಿದರು. ತಮ್ಮ ಕುತೂಹಲದ ಪ್ರಶ್ನೆಗಳನ್ನು ಕೇಳುವ ಮೂಲಕ ಸಂಶೋಧನಾ ಕ್ಷೇತ್ರದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದರು.
ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಪ್ರಶ್ನೆ ಹುಟ್ಟಿಸುವುದ ಅದಕ್ಕೆ ಸಾಕ್ಷ್ಯಾಧಾರಿತ ಪರಿಹಾರ ಕಂಡುಕೊಳ್ಳುವವರೆಗೆ ನಡೆಯುವ ಸಂಶೋಧನಾ ಪ್ರಕ್ರಿಯೆಯ ಪರಿಚಯವಾಯಿತು. ಇದರಿಂದ ವೈಜ್ಞಾನಿಕ ಚಿಂತನೆ, ಕುತೂಹಲ, ತಾರ್ಕಿಕ ವಿಚಾರಶಕ್ತಿ ಮತ್ತು ಆರೋಗ್ಯ ಕ್ಷೇತ್ರದಲ್ಲಿನ ನವೀನ ಆವಿಷ್ಕಾರಗಳ ಮಹತ್ವವನ್ನು ಅರಿಯಲು ಸಹಾಯವಾಯಿತು.
ICMR–SHINE ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯ ಪ್ಯಾನ್-ಇಂಡಿಯಾ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಜೈವಿಕ ವೈದ್ಯಕೀಯ ಹಾಗೂ ಆರೋಗ್ಯ ಸಂಶೋಧನಾ ಕ್ಷೇತ್ರಗಳಲ್ಲಿ ಆಸಕ್ತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಇದರ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಸ್ಪರ್ಧೆಯನ್ನೂ ಆರಂಭಿಸಲಾಗಿದ್ದು, ಸಾರ್ವಜನಿಕ ಆರೋಗ್ಯ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಸೂಚಿಸುವ ವೈಯಕ್ತಿಕ ಪರಿಕಲ್ಪನಾ ಪತ್ರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಸ್ಪರ್ಧೆಯು ಆಗಸ್ಟ್ 11ರಿಂದ ಸೆಪ್ಟೆಂಬರ್ 11, 2026ರವರೆಗೆ ನಡೆಯಲಿದೆ.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಶಾಲೆಗಳು, ಪಿಯು ಕಾಲೇಜುಗಳು, ವಿದ್ಯಾರ್ಥಿಗಳು, ಶಿಕ್ಷಕರು, ವಿಜ್ಞಾನಿಗಳು, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿಗೆ ICMR–NITM ನಿರ್ದೇಶಕರಾದ ಡಾ. ಸುಬರ್ಣ ರಾಯ್ ಹಾಗೂ ನೋಡಲ್ ಸಮನ್ವಯಾಧಿಕಾರಿ ಡಾ. ಬನಪ್ಪ ಉಂಗರ್ ಕೃತಜ್ಞತೆ ಸಲ್ಲಿಸಿದರು.



