*ಶೌಚಾಲಯ ರಹಿತ ಕುಟುಂಬಗಳನ್ನು ಗುರುತಿಸಿ ಸಿಟಿಜನ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ : ಜಿಪಂ ಸಿಇಓ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಗ್ರಾಮ ಪಂಚಾಯತವಾರು ಶೌಚಾಲಯ ರಹಿತ ಕುಟುಂಬಗಳನ್ನು ಗುರುತಿಸಿ, ಅವರುಗಳಿಂದ ಸಿಟಿಜನ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಬೇಕು. ಈ ಕುರಿತು ಗ್ರಾಮ ಪಂಚಾಯಗಳಲ್ಲಿ ವ್ಯಾಪಕ ಪ್ರಚಾರಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಅ.1) ರಂದು ವಿಡಿಯೋ ಸಂವಾದ ಮೂಲಕ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಡೆಸಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನರೇಗಾ ಯೋಜನೆ
ಮನರೇಗಾ ಯೋಜನೆಯಡಿ ಕಡ್ಡಾಯವಾಗಿ ಜನರಿಗೆ ಕೆಲಸ ನೀಡಿ ತಾಲ್ಲೂಕಾವಾರು ನೀಡಿರುವ ಗುರಿಗನುಗುಣವಾಗಿ ಪ್ರಗತಿ ಸಾಧಿಸುವುದು, ಸನ್ 2023-24 ನೇ ಸಾಲಿನಡಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಪೂರ್ಣಗೊಳಿಸದೇ ಹಾಗೇ ಉಳಿದುಕೊಂಡಿವೆ. ಅಂತಹ ಕಾಮಗಾರಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಪೂರ್ಣಗೊಳಿಸಬೇಕು ಅದೇ ರೀತಿ 2024-25ನೇ ಸಾಲಿನ ನರೇಗಾ ಯೋಜನೆಯಡಿ ಆದ್ಯತೆ ಕಾಮಗಾರಿಗಳಾದ ಶಾಲಾ ಶೌಚಾಲಯ, ಶಾಲಾ ಆಟದ ಮೈದಾನ, ಶಾಲಾ ಅಡುಗೆ ಕೋಣೆ, ಎಸ್.ಡಬ್ಲ್ಯೂ.ಎಮ್ ಕಟ್ಟಡ ಹಾಗೂ ಗ್ರಾಮ ಪಂಚಾಯತ ಕಟ್ಟಡಗಳನ್ನು ಆದ್ಯತೆ ಮೇರಗೆ ಕೈಗೊಳ್ಳುವಂತೆ ಸೂಚಿಸಿದರು.
ಓಂಬಡ್ಸಮನ್ ವಸೂಲಾತಿ ಮೇಲೆ ಬಾಕಿ ಇರುವ ಮೊತ್ತವನ್ನು ಆದಷ್ಟು ಬೇಗ ವಸೂಲಾತಿ ಮಾಡಿ ಜಿಲ್ಲಾ ಪಂಚಾಯತಗೆ ವರದಿ ಸಲ್ಲಿಸಲು ಸೂಚಿಸಿದರು.
ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆ
ವೈಯಕ್ತಿಕ ಗೃಹ ಶೌಚಾಲಯ : ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಗೃಹ ಶೌಚಾಲಯಕ್ಕೆ ಸಂಬಂಧಿಸಿದಂತೆ ಶೌಚಾಲಯ ರಹಿತ ಕುಟುಂಬಗಳನ್ನು ಗುರುತಿಸಿ ಸಿಟಿಜನ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಲು ವ್ಯಾಪಕ ಪ್ರಚಾರ ಕೈಗೊಳ್ಳಲು ತಿಳಿಸಿದರು.
ಘನ ತ್ಯಾಜ್ಯ ನಿರ್ವಹಣೆ : ಘನ ತ್ಯಾಜ್ಯ ನಿರ್ವಹಣೆ ಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ದಿನ ಕಸ ನಿರ್ವಹಣೆ ಕಾರ್ಯ ಪ್ರಗತಿಯಲ್ಲಿರುಬೇಕು. ಬೆಳಗಾವಿ ಮತ್ತು ಖಾನಾಪೂರ ತಾಲೂಕುಗಳಲ್ಲಿ ಕಸ ಸಂಗ್ರಹಣೆ ಕಾರ್ಯ ಸರಿಯಾದ ರೀತಿಯಲ್ಲಿ ನಡಿಯುತ್ತಿಲ್ಲ ಎಂದು ದೂರುಗಳು ಬರುತ್ತಿದ್ದು, ಸಂಬಂಧಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಕಾರ್ಯ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು ಹಾಗೂ ಪ್ರಗತಿ ಹಂತದಲ್ಲಿರುವ ಎಸ್. ಡಬ್ಲ್ಯೂ. ಎಮ್ ಶೆಡ್ಗಳ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಲು ಸೂಚಿಸಿದರು.
ದ್ರವ ತ್ಯಾಜ್ಯ ನಿರ್ವಹಣೆ : ಸ್ಥಗಿತಗೊಂಡ ಘಟಕಗಳ ಕಾಮಗಾರಿಗಳನ್ನು ಪ್ರಾರಂಭಿಸಿ ಆದಷ್ಟು ಬೇಗ ಮುಕ್ತಾಯಗೊಳಿಸಲು ಸೂಚಿಸಿದರು.
ಮಲ ತ್ಯಾಜ್ಯ ನಿರ್ವಹಣೆ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮ ಪಂಚಾಯತಿಯ ಮಲ ತ್ಯಾಜ್ಯ ನಿರ್ವಹಣೆ ಘಟಕ ಕಾಮಗಾರಿಯ ಕಾರ್ಯ ಮುಕ್ತಾಯಗೊಂಡಿದ್ದು ಅದನ್ನು ಅತೀ ತುರ್ತಾಗಿ ಕಾರ್ಯಗತಗೊಳಿಸಲು ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನೆ
ಬೆಳಗಾವಿ ಜಿಲ್ಲೆಯಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಒಟ್ಟು 2270 ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳಿದ್ದು, ಅದರಲ್ಲಿ 2247 ಕಾಮಗಾರಿಗಳು ಚಾಲ್ತಿಯಲ್ಲಿದ್ದು 1384 ಕಾಮಗಾರಿಗಳು ಮುಕ್ತಾಯಗೊಂಡಿರುತ್ತವೆ ಆದ ಕಾರಣ ತಾಲೂಕಿನ ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿಯೊಂದು ಕಾಮಕಾರಿಗಳನ್ನು ಖುದ್ದಾಗಿ ಪರಿಶೀಲನೆ ಮಾಡಬೇಕು ಹಾಗೂ ನೀರಿನ ಮೂಲಗಳ ಜಿಯೋಟ್ಯಾಗ್ ಗೆ ಸಂಬಂಧಿಸಿದಂತೆ ಈಗಾಗಲೇ ಶೇ.81% ರಷ್ಟು ಮುಕ್ತಾಯವಾಗಿದ್ದು ಬಾಕಿ ಉಳಿದಿರುವ ಜಿಯೋ ಟ್ಯಾಗ್ ಗಳನ್ನು ಆದಷ್ಟೂ ಬೇಗನೆ ಮಾಡಿ ವರದಿ ನೀಡಬೇಕೆಂದು ಮಾನ್ಯರು ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು
ನೀರಿನ ಗುಣಮಟ್ಟ ಪರೀಕ್ಷೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ಗ್ರಾಮ ಪಂಚಾಯತಿಗಳಿಗೆ ಎಫ್.ಟಿ.ಕೆ ಕಿಟ್ ಗಳನ್ನು ವಿತರಣೆ ಮಾಡಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಕಿಟ್ ಗಳನ್ನು ಉಪಯೋಗಿಸಿ ನೀರಿನ ಗುಣಮಟ್ಟವನ್ನು ಪರೀಕ್ಷೆ ಮಾಡಬೇಕೆಂದು ಸೂಚನೆ ನೀಡಿದರು.
ಮುಂದುವರದು, ಬೆಳಗಾವಿ ಮತ್ತು ಚಿಕ್ಕೋಡಿ ಎರಡು ವಿಭಾಗ ಮಟ್ಟದಲ್ಲಿ ಆದಷ್ಟು ಬೇಗನೆ ಮೈಕ್ರೋಬಯೋಲಾಜಿ ಲ್ಯಾಬ್ ಪ್ರಾರಂಭಿಸಬೇಕೆಂದು ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚನೆ ನೀಡಿದರು. ಅದರ ಜೊತೆಗೆ ಗ್ರಾಮ ಪಂಚಾಯತಿಯಲ್ಲಿ ಕಲುಷಿತ ನೀರಿನಿಂದ ಯಾವುದೇ ತೊಂದರೆಯಾಗದಂತೆ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ತಾಲೂಕಿನ ಎಲ್ಲ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM)
ಎನ್ ಆರ್ ಎಲ್ ಎಮ್ ಗೆ ಸಂಬಂಧಿಸಿದಂತೆ ಸಂಜೀವಿನಿ ಒಕ್ಕೂಟ/ಸ್ವ-ಸಹಾಯ ಸಂಘದ ಸದಸ್ಯರು ತಯಾರಿಸಿದ ಅಪ್ರೋನ್ (Apron) ಗಳನ್ನು ತಾಲೂಕಾವಾರು ಸರಕಾರಿ ಶಾಲೆಯ ಅಡುಗೆ ಸಿಬ್ಬಂದಿಗಳಿಗೆ ವಿತರಿಸಲು ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮಾನ್ಯರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ, ಯೋಜನಾ ನಿರ್ದೇಶಕ(ಡಿ.ಆರ್.ಡಿ.ಎ) ರವಿ ಬಂಗಾರೆಪ್ಪನವರ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಲೆಕ್ಕಾಧಿಕಾರಿ ಗಂಗಾ ಹಿರೇಮಠ, ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಕಾರ್ಯನಿರ್ವಾಹಕ ಅಭಿಯಂತರರು (ಪಂಚಾಯತರಾಜ್)
ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕಾರ್ಯನಿರ್ವಾಹಕ ಅಭಿಯಂತರರು (ಪಿ.ಎಮ್.ಜಿ.ಎಸ್.ವಾಯ್ ಮತ್ತು ಕೆಆರ್ ಆಯ್ ಡಿ ಎಲ್), ಕಛೇರಿ ಅಧೀಕ್ಷಕರು ಬಸವರಾಜ್ ಎಮ್. ಮುರಗಾಮಠ ಜಿಲ್ಲೆಯ ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ