Belagavi NewsBelgaum NewsKannada NewsKarnataka NewsLatestPolitics

*ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ಬೆಳಗಾವಿ ರಣರಂಗ ಆಗುತ್ತೆ, ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ನಾಡ ದ್ರೋಹಿ ಚಟುವಟಿಕೆ ನಡೆಸಲು ಸಜ್ಜಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಆಕ್ರೋಶ ಹೊರ ಹಾಕಿದ್ದಾರೆ. 

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇದ್ದುಕೊಂಡು ನಮ್ಮ ಅನ್ನ ತಿಂದು, ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಖರು ಬೆಳಗಾವಿಯಲ್ಲಿದ್ದಾರೆ. ಎಂಇಎಸ್ ಜೀವ ಇಲ್ಲದ, ಹಲ್ಲು ಇಲ್ಲದ ಹಾವು ಇದ್ದಂತೆ. ಎಂಇಎಸ್ ಪುಂಡರು ಕರಾಳ ದಿನ ಆಚರಣೆ ಮಾಡದಂತೆ ಪೊಲೀಸ್ ಇಲಾಖೆ ಜಿಲ್ಲಾಡಳಿತ ಮತ್ತು ಸರ್ಕಾರ ತಿರ್ಮಾನ ಕೈಗೊಳ್ಳಬೇಕು. ಎಂಇಎಸ್ ಗೆ ಕರಾಳ ದಿನಾಚರಣೆಗೆ ಅವಕಾಶ ಕೊಟ್ಟರೆ ಬೆಳಗಾವಿ ರಣರಂಗ ಆಗುತ್ತೆ. ರಣರಂಗ ಆಗೋದು ಬೇಡ ಅಂದ್ರೆ ಅವರ ಕಾರ್ಯಕ್ರಮ ರದ್ದು ಮಾಡಬೇಕು ಎಂದರು.

ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದವರು ಹೋರಾಟ ಮಾಡಿದವರ ಮೇಲೆ ಕೇಸ್ ಹಾಕುತ್ತಾರೆ. ಕರಾಳ ದಿನಾಚರಣೆ ಮಾಡುವವರ ಮೇಲೆ ಕೇಸ್ ಹಾಕಿ ಜೈಲಿಗೆ ಕಳುಹಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಕರಾಳ ದಿನಾಚರಣೆ ವಿಷಯವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರ ಜೊತೆ ನಾನು ಮಾತನಾಡುತ್ತೇನೆ ಎಂದು ಟಿ.ಎ ನಾರಾಯಣಗೌಡ ತಿಳಿಸಿದರು. 

Home add -Advt

Related Articles

Back to top button