Kannada NewsKarnataka News
ಬೇರೆ ಕಡೆಯಿಂದ ಗೂಂಡಾಗಳು ಬಂದಿದ್ರೆ ಬೆಳಗಾವಿ ಅಧಿಕಾರಿಗಳು ಏನು ಮಾಡ್ತಿದ್ದಾರೆ: ಶಾಸಕ ಹ್ಯಾರಿಶ್ ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೇರೆ ಕಡೆಯಿಂದ ಗೂಂಡಾಗಳು ಬೆಳಗಾವಿಗೆ ಬಂದಿದ್ದರೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಶ್ ಪ್ರಶ್ನಿಸಿದರು.
ಶುಕ್ರವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಗಳೂರಿನಿಂದ ಗೂಂಡಾಗಳು ಬಂದು ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಕಡೆಯಿಂದ ಬೆಳಗಾವಿಗೆ ಗೂಂಡಾಗಳು ಬಂದಿದ್ದರೆ ಇಲ್ಲಿನ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕಳೆದ ಮೂರ್ನಾಲ್ಕು ದಿನದಿಂದ ಬೆಳಗಾವಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ವೀಕ್ಷಕನಾಗಿ ಬಂದಿದ್ದೇನೆ. ಕಾಂಗ್ರೆಸ್ ಮನವಿಗೆ ಸ್ಪಂದಿಸಿರುವ ಜಿಲ್ಲಾ ಚುನಾವಣಾ ಅಧಿಕಾರಿಗಳು ಎಲ್ಲ ಮತಗಟ್ಟೆಯಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸಿ ಚುನಾವಣೆಯ ಅಕ್ರಮವನ್ನು ತಡೆಯಲು ಸಹಕರಿಸಿರುವುದನ್ನು ಎಲ್ಲ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ ಎಂದರು.
ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಯಾವುದೇ ತೊಂದರೆ ಇಲ್ಲ. ಇರುವುದು ಬಿಜೆಪಿಗೆ ಇಬ್ಬರು ಅಭ್ಯರ್ಥಿ ಇರುವುದರಿಂದ ಮತದಾರರಿಗೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.
ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್, ಕಾಂಗ್ರೆಸ್ ಮುಖಂಡರಾದ ಆರ್.ಪಿ.ಪಾಟೀಲ, ಗಜು ದರ್ನಾಯಕ, ಪರಶುರಾಮ ಒಗ್ಗನ್ನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ