ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ದೇಶದ ಮತ್ತೊಂದು ಅಧ್ಯಾಯ ಆರಂಭ – ಬಸವಪ್ರಸಾದ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ದೇಶದ ಮತ್ತೊಂದು ಅಧ್ಯಾಯ ಆರಂಭವಾಗಲಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಯೊಬ್ಬ ಅರ್ಹ ಮತದಾರರು ಬಿಜೆಪಿ ಬೆಂಬಲಿಸಬೇಕೆಂದು ಬಸವಜ್ಯೋತಿ ಯುಥ್ ಪೌಂಡೇಶನ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.
ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮೇಖಳಿ, ಬಾವಚಿ ಮತ್ತು ಹುಬ್ಬರವಾಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಕಳೆದ ೧೦ ವರ್ಷ ಆಡಳಿತ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಮೇಲೆ ಒಂದೇ ಒಂದು ಆರೋಪ ಬಂದಿಲ್ಲ, ದೇಶದ ಒಳತಿಗಾಗಿ ಸುಭದ್ರ ಆಡಳಿತ ನಡೆಸಿದ್ದಾರೆ. ನರೇಂದ್ರ ಮೋದಿ ಅವರು ಮೂರನೆ ಬಾರಿಗೆ ಪ್ರಧಾನಿಯಾಗುವ ಮೂಲಕ ಭಾರತದ ಇತಿಹಾಸವನ್ನು ಸುವರ್ಣಾಕ್ಷರದಲ್ಲಿ ಬರೆಯಲಿದ್ದಾರೆ ಎಂದರು.
ಲೋಕಸಭೆ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಸಂಸದರಾಗಿ ಆಯ್ಕೆಯಾದ ಅಣ್ಣಾಸಾಹೇಬ ಜೊಲ್ಲೆ ಅವರು ಅಭಿವೃದ್ಧಿಗಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಎರಡನೆ ಬಾರಿಗೆ ಆಯ್ಕೆಯಾಗಲು ಬಿಜೆಪಿ ಬೆಂಬಲಿಸಬೇಕು ಎಂದು ಕರೆ ನೀಡಿದರು.
ಶಾಸಕ ದುರ್ಯೋಧನ ಐಹೊಳೆ ಮಾತನಾಡಿ ಪ್ರಧಾನಿ ನರೇಂದ್ರ ಮೊದಿ ಅವರು ಭಾರತ ಮಾತೆಯ ಕಿರಿಟ ಇಡೀ ವಿಶ್ವಕ್ಕೆ ಪರಿಚಯ ಮಾಡಿಕೊಟ್ಟವರಲ್ಲಿ ಮೊದಲಿಗರಾಗಿದ್ದಾರೆ. ಆರ್ಥಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಿ ಪ್ರತಿ ಗ್ರಾಮಕ್ಕೆ ಜಲಜೀವನ ಮಿಷನ್ ಅಡಿಯಲ್ಲಿ ಶುದ್ದ ಕುಡಿಯುವ ನೀರು, ಮಹಿಳೆಯರ ಕಣ್ಣಿರು ಒರೆಸುವ ನಿಟ್ಟಿನಲ್ಲಿ ಉಚಿತ ಉಜ್ವಲ ಗ್ಯಾಸ ನೀಡಿದ್ದಾರೆ. ಕೇಂದ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಬೆಂಬಲಿಸಬೇಕು ಎಂದರು.
ಈ ಸಂದಭ್ದಲ್ಲಿ ಮಂಡಲ ಅಧ್ಯಕ್ಷ ಪ್ರಥ್ವರಾಜ ಜಾಧವ, ಸದಾನಂದ ಹಳಿಂಗಳೆ, ರಮೇಶ ಕಾಳನ್ನವರ, ಮನೋಜಕುಮಾರ ಮನಗೂಳಿ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೇಮಲಾಪೂರೆ, ಅಂಕುಶ ಜಾದವ, ಅಪ್ಪಾಸಾಹೇಬ ಬ್ಯಾಕೂಡೆ, ಸಂಜು ನಾಯಿಕ, ವಸಂತ ಪೂಜಾರಿ, ಪುಂಡಲಿಕ ಪೂಜಾರಿ ಸೇರಿದಂತೆ ಮುಂತಾದವರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ