Election NewsKannada NewsKarnataka NewsPolitics

*ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಸಿದ್ದರಾಮಯ್ಯ ಕುರ್ಚಿಗೆ ಕಂಟಕ: ಸಚಿವ ಬೈರತಿ ಸುರೇಶ್* 

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಕೋಲಾರದ ಕಾಂಗ್ರೆಸ್‌ ಅಭ್ಯರ್ಥಿ ಒಂದು ವೇಳೆ ಸೋತರೆ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಸೀಟಿಗೆ ಕಂಟಕವಾಗುತ್ತದೆ. ಇದಕ್ಕೆ ನೀವೇ ಹೊಣೆಗಾರರಾಗುತ್ತೀರಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು

ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಚಿವ ಬೈರತಿ ಸುರೇಶ್ ಅವರು ಮಾತನಾಡಿ, ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಸೋತರೆ ಸಿದ್ದರಾಮಯ್ಯ ಅವರ ಸೀಟಿಗೆ ಕಂಟಕವಾಗುತ್ತದೆ. ನೀವು ಆ ಕೆಲಸ ಮಾಡಬೇಡಿ. ನಿಮಗೆ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನೀವೆಲ್ಲರೂ ಸೇರಿ ಕುರುಬ ಸಮುದಾಯದ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರು ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ. ಅವರ ಸೀಟಿಕೆ ಕಂಟಕವಾದರೆ ನೀವೇ ನೇರವಾಗಿ ಹೊಣೆಗಾರರಾಗುತ್ತೀರಿ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನಗಳು ಬಂದರೆ ಸರ್ಕಾರ ಕಿತ್ತೊಗೆಯುತ್ತೇವೆ ಎನ್ನುವ ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಅರ್ಥವೇ ಗೊತ್ತಿಲ್ಲ, ವಿಧಾನಸಭಾ ಚುನಾವಣೆಯೇ ಬೇರೆ, ಲೋಕಸಭಾ ಚುನಾವಣೆಯೇ ಬೇರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಕಿಡಿಕಾರಿದರು. 

ಲೋಕಸಭಾ ಚುನಾವಣೆಯಲ್ಲಿ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡರು. ವಿಧಾನಸಭೆ ಚುನಾವಣೆ ಬೇರೆ, ಲೋಕಸಭೆ ಚುನಾವಣೆ ಬೇರೆ. ರಾಜ್ಯ ಸರಕಾರಕ್ಕೆ ಇರುವ ಅಧಿಕಾರ ಬೇರೆ, ಕೇಂದ್ರ ಸರಕಾರಕ್ಕೆ ಇರುವ ಅಧಿಕಾರ ಬೇರೆ. ಅದು ಅವರಿಗೆ ಅರ್ಥವಾಗುತ್ತಿಲ್ಲ, ಪ್ರಜಾಪ್ರಭುತ್ವದಲ್ಲಿ ಬಿಜೆಪಿಯವರಿಗೆ ನಂಬಿಕೆಯೂ ಇಲ್ಲವೆಂದು ನುಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button