Latest

*ಇಲಿ ಜ್ವರಕ್ಕೆ ವ್ಯಕ್ತಿ ಬಲಿ; ಹಾವೇರಿ ಜಿಲ್ಲೆಯಲ್ಲಿ ಮೊದಲ ಪ್ರಕರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಜೊತೆಗೆ ಇಲಿ ಜ್ವರದ ಅಬ್ಬರವೂ ಹೆಚ್ಚುತ್ತಿದೆ. ಇಲಿ ಜ್ವರಕ್ಕೆ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

Home add -Advt

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್ (72) ಇಲಿ ಜ್ವರದಿಂದ ಮೃತಪಟ್ಟಿದ್ದಾರೆ. 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಉಮೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದರು. ಇಲಿ ಜ್ವರದಿಂದ ಸಾವನ್ನಪ್ಪಿದ್ದಾರೆ ಎಂಬುದು ಇದೀಗ ದೃಢಪಟ್ಟಿದೆ.

Related Articles

Back to top button