*ವಿಜಯೇಂದ್ರ ಫ್ರೀ ಇದ್ದರೆ ಬಂದು ಹೇರ್ ಕಟ್ ಮಾಡಲಿ: ಸಚಿವ ಮಧು ಬಂಗಾರಪ್ಪ ಟಾಂಗ್*

ಪ್ರಗತಿವಾಹಿನಿ ಸುದ್ದಿ: ನನ್ನ ಹೇರ್ ಕಟ್ ಮಾಡುವವರಿಗೆ ಬಿಡುವಿಲ್ಲ. ವಿಜಯೇಂದ್ರ ಫ್ರೀ ಇದ್ದರೆ ಬಂದು ಹೇರ್ ಕಟ್ ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿಕ್ಷಣ ಸಚಿವರಿಗೆ ನೀಟಾಗಿ ಕಟಿಂಗ್ ಮಾಡಿಸಿಕೊಂಡು, ಎಣ್ಣೆ ಹಚ್ಚಿ ತಲೆ ಬಾಚಿಕೊಂಡು ಬನ್ನಿ ಎಂದು ಹೇಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.
ವಿಜಯೇಂದ್ರ ತಮ್ಮನ್ನು ಇನ್ನೂ ಚಿತ್ರರಂಗದಲ್ಲಿರುವ ಭ್ರಮೆಯಲ್ಲಿದ್ದೇನೆ ಎಂದು ಹೇಳುವ ಅಗತ್ಯವಿಲ್ಲ. ಅವರಪ್ಪ ಇನ್ನೂ ಮುಖ್ಯಮಂತ್ರಿ ಎಂಬ ಭ್ರಮೆಯಲ್ಲಿದ್ದಾರೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಎನ್ನುವ ಜವಾಬ್ದಾರಿ ಇರಲಿ ಎಂದು ಕಿಡಿಕಾರಿದರು.
ಇಷ್ಟು ದಿನ ಶಿಕ್ಷಣ ಕ್ಷೇತ್ರವನ್ನು ಹೊಲಸು ಮಾಡಿದ್ದೇ ಬಿಜೆಪಿಯವರು. ಶಿಕ್ಷಣದ ಪಾವಿತ್ರ್ಯತೆ ಕಾಪಾಡುವ ಕೆಲಸ ನಾವು ಮಾಡಿದ್ದೇವೆ ಎಂದು ಇದೇ ವೇಳೆ ಸಿ.ಟಿ ರವಿ ಹೇಳಿಕೆಗೆ ತಿರುಗೇಟು ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ