Kannada News

ನಾಳೆ ನಡೆಯಬೆಕಿದ್ದ ಪಿಯು ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯದಲ್ಲೂ ಬಸ್,ರೈಲು, ಸಾರಿಗೆ ಸಂಚಾರ ಇಲ್ಲದಿರುವ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ತೊಂದೆಯಾಗುವ ಸಾಧ್ಯತೆ ಇರುವುದರಿಂದ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡುವಂತೆ ಸಿಎಂ ಬಿ ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ನಾಳೆ ನಡೆಯಬೇಕಿದ್ದ ಇಂಗ್ಲೀಷ್ ಪರೀಕ್ಷೆ ಮೂಂದೂಡಿದೆ.

Home add -Advt

ಸೋಮವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೊನೆಯ ಪರೀಕ್ಷೆ ನಡೆಯಬೇಕಿತ್ತು. ಆದರೆ ಸಂಚಾರ ವ್ಯವಸ್ಥೆ ಮಾರ್ಚ್ 31ರವರೆಗೆ ಸ್ಥಗಿತಗೊಳ್ಳುತ್ತಿರುವುದರಿಂದ ಮಾಅರ್ಚ್ 31ರ ನಂತರ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Related Articles

Back to top button