Latest

ವಿದ್ಯುತ್ ತಂತಿ ತಗುಲಿ ರೈತ ಸಾವು; ಮಾಲೀಕನನ್ನು ಹೊಡೆದು ಕೊಂದ ಗ್ರಾಮಸ್ಥರು; ಭೀಕರ ಘಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿ ತಗುಲಿ ರೈತ ಸಾವನ್ನಪ್ಪಿದ್ದ ಸುದ್ದಿ ಕೇಳಿ ರೊಚ್ಚಿಗೆದ್ದ ಗ್ರಾಮಸ್ಥರು ಜಮೀನು ಮಾಲೀಕನನ್ನು ಹಿಡಿದು ಹೊಡೆದು ಕೊಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾದ ರೈತ. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಗ್ರಾಮಸ್ಥರು ಜಮೀನು ಮಾಲೀಕ ಅಶ್ವತ್ಥರಾವ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಶ್ವತ್ಥರಾವ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button