ಪ್ರಗತಿವಾಹಿನಿ ಸುದ್ದಿ: ನಕಲಿ ಗುರುತಿನ ಚೀಟಿ ತೋರಿಸಿ ವಿಧಾನಸೌಧಕ್ಕೆ ಪ್ರವೇಶ ಪಡೆದು ಓಡಾಟ ನಡೆಸುತ್ತಿದ್ದ ಗುತ್ತಿಗೆದಾರರೊಬ್ಬರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಜಯನಗರದ ನಿವಾಸಿ ಶ್ರೀಶೈಲ ಬಂಧಿತ ಆರೋಪಿಯಾಗಿದ್ದು, ಸಚಿವಾಲಯದಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿ ಒಳಗಡೆ ಓಡಾಡುತ್ತಿದ್ದ ಎನ್ನಲಾಗಿದೆ. ಎಂ.ಎ ಪದವಿ ಪಡೆದಿರುವ ಶ್ರೀಶೈಲ ಗುತ್ತಿಗೆದಾರರಾಗಿದ್ದಾರೆ. ಗುತ್ತಿಗೆ ಸಂಬಂಧಿತ ಕೆಲಸಕ್ಕಾಗಿ ಆಗಾಗ್ಗೆ ವಿಧಾನಸೌಧಕ್ಕೆ ಬರುತ್ತಿದ್ದರು. ಪಾಸ್ ಇಲ್ಲದೇ ವಿಧಾನಸೌಧದ ಒಳಕ್ಕೆ ಪ್ರವೇಶ ಪಡೆಯಲು ಪರದಾಡುತ್ತಿದ್ದರು. ಇದರಿಂದ ತಪ್ಪಿಸಿಕೊಳ್ಳಲು ಸಚಿವಾಲಯದಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿ ವಿಧಾನಸೌಧದ ಆವರಣ ಪ್ರವೇಶಿಸುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಆಗಸ್ಟ್ 5ರಂದು ನಕಲಿ ಗುರುತಿನ ಚೀಟಿ ತೋರಿಸಿ ತೆರಳುತ್ತಿದ್ದಾಗ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಆರೋಪಿಯನ್ನು ತಡೆದು ವಿಚಾರಣೆ ನಡೆಸಿದರು. ಗುರುತಿನ ಚೀಟಿ ಪರಿಶೀಲಿಸಿದರು. ಆಗ ಅದು ನಕಲಿ ಎಂದು ಗೊತ್ತಾಯಿತು. ಬಳಿಕ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
https://pragativahini.com/cargoods-vehicleaccidenttwo-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ