ಪ್ರಗತಿವಾಹಿನಿ ಸುದ್ದಿ, ಶಿರಸಿ – ನಗರದ ಎಂಇಎಸ್ ಕಾಲೇಜ್ ರಸ್ತೆಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಮೇಲೆ ಮಾರುಕಟ್ಟೆ ಪೊಲೀಸರು ದಾಳಿ ಮಾಡಿದ್ದಾರೆ.
1) ಶಬ್ಬಿರ ತಂದೆ ಪೀರಸಾಬ ಸಾ//ಮಳಗಿ ಈತನನ್ನು ವಶಕ್ಕೆ ಪಡೆದು ಅಂದಾಜು 75,900/- ರೂ ಮೌಲ್ಯದ 2 ಕೆ.ಜಿ 530 ಗ್ರಾಂ ತೂಕದ ಗಾಂಜಾ ಮಾದಕ ವಸ್ತು ,2) ನಗದು ಹಣ -710/- ರೂ 3)ಕೃತ್ಯಕ್ಕೆ ಬಳಸಲಾದ ಅಂದಾಜು 2000/- ರೂ ಮೌಲ್ಯದ ರೆಡ್ಮಿಮೊಬೈಲ್ ಫೊನ್ ಜಪ್ತಿಪಡಿಸಿಕೊಂಡಿದ್ದು ದಾಳಿಯ ಕಾಲಕ್ಕೆ ಮಹ್ಮದ್ ಅಶ್ಪಕ್ ತಂದೆ ಜಹೀರ್ ಅಹ್ಮದ್ ಸಾ// ಅಕ್ಕಿ ಆಲೂರ್ ಪರಾರಿಯಾಗಿರುತ್ತಾನೆ
ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪರಾರಿಯಾದ ಆರೋಪಿತನ ಪತ್ತೆಗೆ ಮಾರುಕಟ್ಟೆ ಪೊಲೀಸರು ಬಲೆ ಬೀಸಿದ್ದಾರೆ
ಶಿವಪ್ರಕಾಶ್ ದೇವರಾಜು ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ, ಬದ್ರಿನಾಥ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ, ರವಿ ಡಿ ನಾಯ್ಕ ಡಿ.ಎಸ್.ಪಿ ಶಿರಸಿ ಉಪವಿಭಾಗ, ಬಿ.ಯು ಪ್ರದೀಪ್ ವೃತ್ತ ನಿರೀಕ್ಷಕರು ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದ ಪ್ರೊ.ಪಿಎಸ್ಐ ರತ್ನಾ ಕುರಿ ಸಿಬ್ಬಂದಿಗಳಾದ ಮಹಾಂತೇಶ ಬಾರಕೇರ, ರಾಮಯ್ಯ ಪೂಜಾರಿ, ಹನುಮಂತ ಮಾಕಾಪುರ , ಮೋಹನ ನಾಯ್ಕರವರನ್ನು ಒಳಗೊಂಡ ತಂಡ ದಾಳಿ ಕಾರ್ಯಾಚರಣೆ ಕೈಗೊಂಡಿತ್ತು
ಪೊಲೀಸ್ ಅಧೀಕ್ಷಕರಾದ ಶಿವಪ್ರಕಾಶ ದೇವರಾಜುರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ