
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ (45) ಕೊಲೆಯಾದ ಅಧಿಕಾರಿ. ಅಪಾರ್ಟ್ ಮೆಂಟ್ ನಿವಾಸದಲ್ಲಿ ವಾಸವಾಗಿದ್ದ ಪ್ರತಿಮಾ ಅವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ.
ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಕಳೆದ 5 ವರ್ಷಗಳಿಂದ ಅಧಿಕಾರಿ ಪ್ರತಿಮಾ ಒಂಟಿಯಾಗಿ ವಾಸವಾಗಿದ್ದರು. ಕಳೆದ ರಾತ್ರಿ ಅಪಾರ್ಟ್ ಮೆಂಟ್ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿದ್ದಾರೆ.
ಕಲ್ಲುಕ್ವಾರಿ ಸ್ಥಗಿತಗೊಳಿಸಿ ಆದೇಶ ನೀಡಿದ್ದೇ ಪ್ರತಿಮಾ ಅವರ ಹತ್ಯೆಗೆ ಕಾರಣವಿರಬಹುದು ಎಂಬ ಅನುಮಾನ ಮೂಡಿದೆ. ಬೆಂಗಳೂರು ನಗರ ಜಿಲ್ಲೆಯ ಹುಣಸಮಾರನಹಳ್ಳಿ ಗ್ರಾಮದ ಸರ್ವೆ ನಂ: 177, 179 ಭಗದಲ್ಲಿ ಅಕ್ರಮ ಗಣಿಗಾರಿಕೆ ದೂರು ಬಂದಿತ್ತು. ಲೈಸನ್ಸ್ ಪಡೆಯದೇ ಕಲ್ಲು ಗಣಿಗಾರಿಕೆ ನಡೆಸಿ, ಕಲ್ಲು ಬಂಡೆಗಳನ್ನು ಬ್ಲಾಸ್ಟ್ ಮಾಡುತ್ತಿದ್ದರು ಎಂಬ ದೂರು ಬಂದ ಹಿನ್ನೆಲೆಯಲ್ಲಿ ಪ್ರತಿಮಾ ಅವರು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆಗೆ ಬ್ರೇಕ್ ಹಾಕಿದ್ದರು. ಇದೇ ದ್ವೇಷಕ್ಕೆ ಪ್ರತಿಮಾ ಅವರ ಕೊಲೆ ನಡೆದಿರುವ ಶಂಕೆ ಶುರುವಾಗಿದೆ. ಒಟ್ಟಾರೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ ಹಲವು ಅನುಮಾನಕ್ಕೆ ಕಾರಣವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ