
ಪ್ರಗತಿವಾಹಿನಿ ಸುದ್ದಿ: 35 ಟನ್ ಗೂ ಅಧಿಕ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳರು ಅಕ್ರಮವಾಗಿ ಕದ್ದು ಮಾರಾಟ ಮಾಡಲು ಮುಂದಾದ ವೇಳೆ ಲಾರಿಯನ್ನು ಕೊಪ್ಪಳದ ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ 16 ರಂದು ಬೆಳಗಿನ ಜಾವ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಬಳಿ ಪೊಲೀಸರು ಲಾರಿಯನ್ನು ತಡೆಯುತ್ತಿದ್ದಂತೆ ಚಾಲಕ ಲಾರಿಯನ್ನ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ ಲಾರಿಯಲ್ಲಿರುವ ಅಕ್ಕಿ ಎಲ್ಲಿಗೆ ಸಾಗಾಟವಾಗುತ್ತಿತ್ತು ಎಂಬುದನ್ನು ಮುನಿರಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
16 ಚಕ್ರದ ವಾಹನದಲ್ಲಿ 35 ಟನ್, ಪೂರ್ತಿ ಲೋಡೆಡ್ ಲಾರಿಯಲ್ಲಿ 8 ಟನ್ ಮಾತ್ರ ಇದೆ ಎಂದು ಪೊಲೀಸ್ ಇಲಾಖೆಗೆ ಆಹಾರ ನಿರೀಕ್ಷಕರು ಲೆಕ್ಕ ಕೊಟ್ಟಿದ್ದಾರೆ.
ಸೆಪ್ಟಂಬರ್ 16 ರಂದು ವಾಹನ ಸಿಕ್ಕರೂ ಮೂರು ದಿನ ಕಳೆದರೂ, ಈ ಅಕ್ಕಿಯನ್ನ ಸೀಜ್ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಅಧಿಕಾರಿಗಳು ಮುಂದಾಗಿಲ್ಲ.
.
ವಶಕ್ಕೆ ಪಡೆದ ಲಾರಿಯಲ್ಲಿದ್ದ ಅಕ್ಕಿ ಪ್ರಮಾಣ ಎಷ್ಟು, ಲಾರಿ ಚಾಲಕ, ಮಾಲೀಕ ಯಾರು? ಎಲ್ಲಿಗೆ ಸಾಗಾಟ ಮಾಡಲಾಗ್ತಿತ್ತು? ಎಲ್ಲವನ್ನೂ ವರದಿ ಮಾಡಿ ಪೊಲೀಸ್ ಇಲಾಖೆಗೆ ದೂರು ನೀಡಿ, ಎಫ್ಐಆರ್ ದಾಖಲಿಸಬೇಕಾಗಿರೋದು ಆಹಾರ ಇಲಾಖೆ ಅಧಿಕಾರಿಗಳ ಕೆಲಸವಾಗಿದೆ.