ಪ್ರಗತಿವಾಹಿನಿ ಸುದ್ದಿ, ಬೆಂಗಳೂರು; ಒಂದು ವಿಧಾನಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ. ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ. ಆದರೆ, ಇದರ ಬಗ್ಗೆ ನಿರ್ಧರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದ್ದು, ಫೆ. 17ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಆದರೆ ಯಾರನ್ನು ಕಣಕ್ಕಿಳಿಸಬೇಕೆಂಬ ಗೊಂದಲದಲ್ಲಿ ಬಿಜೆಪಿಯಿದೆ.
ಇದರ ಬೆನ್ನಿಗೆ ಇಂದು ವಿಕಾಸಸೌಧದಲ್ಲಿ ಹೇಳಿಕೆ ನೀಡಿರುವ ಡಿಸಿಎಂ ಲಕ್ಷ್ಮಣ್ ಸವದಿ, ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ. ನನಗೂ ಸಹಜವಾಗಿ ರಾಜಕೀಯ ಅಪೇಕ್ಷೆಗಳಿವೆ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿ ಹೈಕಮಾಂಡ್ ಲಕ್ಷ್ಮಣ ಸವದಿಯ ಬೆನ್ನಿಗೆ ನಿಂತಿದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರ್. ಶಂಕರ್ ಗೆ ಟಿಕೆಟ್ ನೀಡಲು ಮುಂದಾಗಿದ್ದಾರೆ. ರಾಣೆಬೆನ್ನೂರು ಟಿಕೆಟ್ ತ್ಯಾಗ ಮಾಡಿದರೆ ಸಚಿವ ಸ್ಥಾನ ಮತ್ತು ಪರಿಷತ್ ಸ್ಥಾನ ಕೊಡಿಸುವುದಾಗಿ ಆರ್. ಶಂಕರ್ ಗೆ ವಾಗ್ದಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈಗ ಯಡಿಯೂರಪ್ಪ ಸಂದಿಗ್ದ ಪರಿಸ್ಥಿತಿಯಲ್ಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ