
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಅವರ ವಿರುದ್ಧದ ತನಿಖೆಯೂ ಮುಕ್ತಾಯವಾಗಿದೆ. ಹಾಗಾಗಿ ಬೇಗ್ ಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ವಾದ ಮಂಡಿಸಿದ್ದರು. ಅಂತಿಮವಾಗಿ ಸಿಬಿಐ ವಿಶೇಷ ನ್ಯಾಯಾಲಯ ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.