Latest

ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಜೂನ್ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಿಂಚು, ಗುಡುಗು ಸಹಿತ ಮಳೆಯಾಗಲಿದೆ. ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Related Articles

Back to top button