
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಲಪ್ರಭಾ ಅಣೆಕಟ್ಟೆ (ನವಿಲುತೀರ್ಥ) ಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ಅಣೆಕಟ್ಟೆಯಿಂದ ನೀರು ಬಿಡುವ ಸಾಧ್ಯತೆ ಇದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಇಲಾಖೆ, ಮಲಪ್ರಭಾ ಅಣೆಕಟ್ಟೆಯ ಸಾಮರ್ಥ್ಯ 2079.50 ಅಡಿ. ಸಧ್ಯ 2066.70 ಅಡಿ ನೀರು ಭರ್ತಿಯಾಗಿದೆ. 48821 ಕ್ಯುಸೆಕ್ ನೀರು ಒಳಹರಿವಿದೆ. ಕೆಲವೇ ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
ಹಾಗಾಗಿ ಒಳಹರಿವನ್ನು ಆಧರಿಸಿ ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ. ಹಾಗಾಗಿ ನದಿ ಪಾತ್ರದಲ್ಲಿರುವವರು ತಕ್ಷಣ ತಮ್ಮ ಆಸ್ತಿಪಾಸ್ತಿಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ