
ಪ್ರಗತಿವಾಹಿನಿ; ಬೆಂಗಳೂರು – ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತೀವ್ರ ವಾಯುಭಾರ ಕುಸಿತದ ಕಾರಣದಿಂದ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ.
ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
- ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಮಾ. 9ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಮಾ. 8 ಮತ್ತು ಮಾ. 9ರಂದು ರಾಜ್ಯ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವವಿದೆ.
ಬೆಂಗಳೂರಿನಲ್ಲಿ ಮುಂದಿನ ಕೆಲ ದಿನಗಳು ಬೆಳಗ್ಗೆಯ ಹೊತ್ತು ಮಂಜು ಮುಸುಕಿದ ವಾತಾವರಣ ಇರಲಿದೆ
ಬೆಳಗಾವಿ: BDCC ಬ್ಯಾಂಕ್ ಶಾಖೆಯಲ್ಲಿ ದರೋಡೆ; 5 ಕೋಟಿ ಹಣ, ಚಿನ್ನಾಭರಣ ಕದ್ದು ಪರಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ