Belagavi NewsBelgaum News

*ಸರಕಾರಿ ಪ್ರಾಯೋಜಿತ ಯೋಜನೆಗಳನ್ನು ಅನುಷ್ಠಾನಗೊಳಿಸಿ: ಸಂಸದ ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬ್ಯಾಂಕರಗಳ ಸಭೆಯ (ಡಿಸಿಪಿ/ಡಿಎಲ್ಆರ್ ಪಿ) ಎಲ್ಲ ಬ್ಯಾಂಕ್ ಗಳ ಅಧಿಕಾರಿಗಳನ್ನು ಉದ್ದೇಶಿಸಿ ಜಗದೀಶ್ ಶೆಟ್ಟರ್ ಮಾತನಾಡಿದರು. 

ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಸರಕಾರಿ ಪ್ರಾಯೋಜಿತ ಯೋಜನೆಗಳನ್ನು ಅನುಷ್ಠಾನಗೊಳಿಸಿ  ಹಾಗೂ ಗ್ರಾಮೀಣ ಭಾಗಗಳಲ್ಲಿ ಬ್ಯಾಂಕ್ ಶಾಖೆಗಳನ್ನು ಪ್ರಾರಂಭಿಸಲು ಲೀಡ ಬ್ಯಾಂಕ್ ಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಂದಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರಕಾರಿ ಯೋಜನೆಗಳ ಅನುಷ್ಟಾನದ ಪ್ರಗತಿಯನ್ನು ಪರಿಶೀಲಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಜಿಪಂ ಸಿಇಒ ರಾಹುಲ್ ಶಿಂಧೆ ರವರು ರವರು ಮಾತನಾಡಿ ಬ್ಯಾಂಕುಗಳಲ್ಲಿ ಬಹುದಿನದಿಂದ ಬಾಕಿ ಇರುವ ಸರಕಾರಿ ಯೋಜನೆಯ ಫಲಾನುಭವಿಗಳ ವಿವರವನ್ನು ಆದಷ್ಟು ಬೇಗನೆ ಪರಿಶೀಲಿಸಿ, ಮುಂದಿನ ಕ್ರಮವನ್ನು ತೆಗೆದುಕೊಳ್ಳಬೇಕು ಹಾಗೂ ರೈತ ಹಾಗೂ  ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡವರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೈತ ಮುಖಂಡರು ಮಾತನಾಡಿ ಬೆಳಗಾವಿ ಜಿಲ್ಲೆ ಕೃಷಿ ಆಧಾರಿತ ಜಿಲ್ಲೆಯಾಗಿರುವುದರಿಂದ ರೈತರಿಗೆ ಸಾಲ  ಒದಗಿಸುವ ಸಂದರ್ಭದಲ್ಲಿ ಬರುವ ವಿವಿಧ ರೀತಿಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕೆಂದು ಸಭೆಯಲ್ಲಿ ಇದ್ದ ಎಲ್ಲ ಬ್ಯಾಂಕಗಳ ಅಧಿಕಾರಿಗೆ  ಮನವಿಮಾಡಿಕೊಂಡರು. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಮಾತನಾಡಿ ಬ್ಯಾಂಕುಗಳಿಂದ ಸಾಲ ಪಡೆಯುವ ಸಮಯದಲ್ಲಿ ಆಗುವ ಸಮಸ್ಯೆಗಳ ಬಗ್ಗೆ ವಿವರವಾಗಿ ಸಭೆಗೆ ತಿಳಿಸಿದರು ಹಾಗೂ ಇನ್ನೂ ಮುಂದೆ ಈ ತರಹ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಸಭೆಗೆ ತಿಳಿಸಿದರು. 

ಜಿಲ್ಲಾ ಅಗ್ರಣಿ  ಬ್ಯಾಂಕನ ಮುಖ್ಯಸ್ಥರಾದ ಸುರೇಶ ಪೈ ರವರು ಮಾತನಾಡಿ ಮೊದಲ ತ್ರೈಮಾಸಿಕದ ವರದಿಯನ್ನು ಸಭೆಗೆ ಪ್ರಸ್ತುತ ಪಡಿಸಿದರು. ಈ ಸಭೆಗೆ ರಿಸರ್ವ ಬ್ಯಾಂಕ ಆಫ್ ಇಂಡಿಯಾ ಅಧಿಕಾರಿ ಪಿ.ಬಿಸ್ವಾಸ್, ನಬಾರ್ಡ ಡಿ.ಡಿ.ಎಮ್ ಶ್ರಿ ಅಭಿನವ ಯಾದವ, ಬೆಳಗಾವಿ ಜಿಲ್ಲೆಯ ಎಲ್ಲ ಬ್ಯಾಂಕರಗಳ ಪ್ರತಿನಿಧಿಗಳು, ಸರಕಾರಿ ಇಲಾಖೆಯ ಮುಖ್ಯಸ್ಥರು, ರೈತ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮುಖಂಡರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button