ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಸರಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರಪ್ಪ, ಎಚ್.ಕೆ. ಪಾಟೀಲ, ಕೆ.ಜೆ. ಜಾರ್ಜ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಮಕ್ಕಳ ಆಟ ಪಾಠಕ್ಕೆ ಸ್ನೇಹಿತರಾಗಿ; ಪಾಲಕರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಲಹೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ