Latest

ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ” ಎಂದು ತಿಳಿಸಿದರು.

“ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರಕಾರ. ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ” ಎಂದರು.

“ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ” ಎಂದು ಅವರು ತಿಳಿಸಿದರು.

Home add -Advt
https://pragati.taskdun.com/dcm-d-k-shivakumar-will-hold-a-series-of-meetings-today/
https://pragati.taskdun.com/the-best-time-came-again-to-buy-gold/
https://pragati.taskdun.com/praveens-tweet-against-siddaramaiah-went-viral-after-3-years/

Related Articles

Back to top button