Kannada News

ಬೆಳಗಾವಿ : ಪ್ರಮುಖ ಸುದ್ದಿಗಳು

ಬೆಳಗಾವಿ : ಪ್ರಮುಖ ಪ್ರಕಟಣೆಗಳು ಮತ್ತು ಸುದ್ದಿಗಳು

 

ಜುಲೈ 22 ರಂದು ವಿದ್ಯುತ್ ನಿಲುಗಡೆ  

ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ಯು ಜಿ ಕೇಬಲ್ ಕೆಲಸ ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ವಡಗಾಂವ ವಿದ್ಯುತ ವಿತರಣಾ ಕೇಂದ್ರದಿಂದ ಹೊರಡುವ ಎಫ್-14 ಆದರ್ಶನಗರ ಪೂರಕದ ಮೇಲೆ ಬರುವ ಆನಂದ ನಗರ, ಓಂಕಾರನಗರ, ಯಳ್ಳೂರ ರೋಡ್, ಯರಮಾಳ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸರ್ವೋದಯ ಮಾರ್ಗ ಪ್ರದೇಶಗಳಲ್ಲಿ ಜುಲೈ 22 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 06 ಗಂಟೆಯ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವ್ಯಕ್ತಿ ಕಾಣೆ

ಅಪ್ಪಯ್ಯಾ ರಾಮಾ ಮಾಳೇನಟ್ಟಿ ಎಂಬುವರು ಕಾಕತಿ ಚೆನ್ನಮ್ಮಾ ನಗರದಲ್ಲಿರುವ ತಮ್ಮ ಮನೆಯಿಂದ ಕೆಲಸಕ್ಕೆ ಹೋಗುತ್ತೇನೆ ಎಂದು ಹೊರಗಡೆ ಹೋದವರು ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಲಕ್ಷ್ಮೀ ಅಪ್ಪಯ್ಯಾ ಮಾಳೇನಹಟ್ಟಿ ಅವರು ಕಾಕತಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.

ಕಾಣೆಯಾದವರು ಮಾನಸಿಕ ಒತ್ತಡದಲ್ಲಿದ್ದು, ವಯಸ್ಸು 46 ವರ್ಷ, ಎತ್ತರ 5 ಫೂಟ್4 ಇಂಚು,  ಸದೃಡವಾಗಿದ್ದಾರೆ, ಹಸಿರು ಬಣ್ಣದ ಚೆಕ್ಸ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ, ಕನ್ನಡ, ಮರಾಠಿ, ಹಿಂದಿ ಭಾಷೆ ಮಾತನಾಡುತ್ತಾರೆ.

ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬೆಳಗಾವಿ ಪೊಲೀಸ್ ಆಯುಕ್ತರು ಅಥವಾ ಬೆಳಗಾವಿ ಕಾಕತಿ ಪೊಲೀಸ್ ಠಾಣೆ ಅವರನ್ನು ಸಂಪರ್ಕಿಸಬೇಕು ಎಂದು ಬೆಳಗಾವಿ ಕಾಕತಿ ಪೊಲೀಸ್ ಠಾಣೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಯಂ-ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಆಟಿಸಂ, ಸೆರೆಬ್ರಲ್ ಪಾಲ್ಸಿ, ಬುದ್ಧಿಮಾಂದ್ಯತೆ ಮತ್ತು ಬಹುವಿಧ ಅಂಗವೈಕಲ್ಯ ಹೊಂದಿರುವ ಮಕ್ಕಳಿಗಾಗಿ ಬೆಳಗಾವಿ ನಗರ ಪ್ರದೇಶದಲ್ಲಿ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಇಚ್ಚೆಯುಳ್ಳ ಅರ್ಹ ಸ್ವಯಂ-ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಚ್ಛೆಯುಳ್ಳ ಸ್ವಯಂ-ಸೇವಾ ಸಂಸ್ಥೆಯವರು ಜುಲೈ 31 ರ ಒಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಿವಾಜಿನಗರ, ಬೆಳಗಾವಿಗೆ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕಛೇರಿ ದೂರವಾಣಿ ಸಂಖ್ಯೆ: 0831-2476097ನ್ನು ಸಂಪರ್ಕಿಸಬೇಕು ಎಂದು ಬೆಳಗಾವಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಳಿ-ಕೈಗಾರಿಕೆ ಉದ್ಯಮಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ ಬೆಳಗಾವಿ ಇವರ ವತಿಯಿಂದ 2019-20ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ವಿಧಾನ ಸಭಾ ಕ್ಷೇತ್ರವಾರು ಇಲಾಖಾ ಯೋಜನೆಗಳ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಕುಡಚಿ(ಪರಿಶಿಷ್ಟ ಜಾತಿ), ರಾಯಬಾಗ(ಪರಿಶಿಷ್ಟ ಜಾತಿ), ಮತ್ತು ಯಮಕನಮರಡಿ(ಪರಿಶಿಷ್ಟ ಪಂಗಡ) ವಿಧಾನಸಭಾ ಕ್ಷೇತ್ರಗಳಲ್ಲಿ ಅಗಸ್ಟ್ ತಿಂಗಳ ಮೊದಲನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.

ಆದ್ದರಿಂದ ಆಯಾ ಮೀಸಲು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಜವಳಿ ಕೈಗಾರಿಕಾ ಉದ್ಯಮಿಗಳು ಹಾಗೂ ಹೊಸದಾಗಿ ಜವಳಿ ಕೈಗಾರಿಕೆ ಸ್ಥಾಪಿಸಲು ಉದ್ದೇಶಿಸಿರುವ ಉದ್ಯಮಿಗಳು ಜುಲೈ 31ರ ಒಳಗಾಗಿ ತಮ್ಮ ವೈಯಕ್ತಿಕ ವಿವರ ಹಾಗೂ ದಾಖಲಾತಿಗಳೊಂದಿಗೆ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ, ಉದ್ಯಮಬಾಗ ಬೆಳಗಾವಿ ಈ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ಕಚೇರಿಯ [email protected] ಇ-ಮೇಲ್  ಮೂಲಕ ಕಳುಹಿಸಿ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0831-2407237 ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ಹಿರಿಯ ನಾಗರಿಕರಿಗಾಗಿ ಈಗಾಗಲೇ ಅನುದಾನ ಪಡೆಯುತ್ತಿರುವ ಹಾಗೂ ಪಡೆಯದೇ ಸೇವೆ ಸಲ್ಲಿಸುತ್ತಿರುವ ಮತ್ತು ಸೇವೆ ಮಾಡಲು ಇಚ್ಛೆಯುಳ್ಳ ಸ್ವಯಂ-ಸೇವಾ ಸಂಸ್ಥೆಗಳು ನೊಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಅಗಸ್ಟ್ 19 ಕೊನೆಯ ದಿನವಾಗಿದೆ. ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ -2007 ರಡಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಳಗಾವಿ ಇವರ ಮುಖಾಂತರ ಜಿಲ್ಲಾಧಿಕಾರಿಗಳವರಿಂದ ಸಂಸ್ಥೆಯ ನೊಂದಣಿ ಮಾಡಿಸಿಕೊಳ್ಳಬೇಕು.

ನೊಂದಣಿ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಂಬಾಕಿನಿಂದಾಗುವ ದುಷ್ಪರಿಣಾಮದ ಕುರಿತು ತರಬೇತಿ ಕಾರ್ಯಾಗಾರ

ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದಾಗಿ ಶರೀರದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ ಎಂದು ಕಾರ್ಖಾನೆ ಸಹಾಯಕ ನಿರ್ದೇಶಕರು ಕಾರ್ಖಾನೆಗಳು ಬಾಯ್ಲರಗಳು, ಕೈಗಾರಿಕಾ ಸುರಕ್ಷತೆ ಹಾಗೂ ಸ್ವಸ್ಥೆ ಇಲಾಖೆ ಭಾರತಿ ಮಗದುಮ್  ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ,ವಾರ್ತಾ ಇಲಾಖೆ, ಪೋಲಿಸ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಬ್ಲೂಂಬರ್ಗ ಇನಿಷಿಯೆಟಿವ್ ಯೋಜನೆ ಅಡಿಯಲಿ ಎನ್.ಎಸ್.ಎಸ ಸಂಯೋಜಕರಿಗೆ, ತಂಬಾಕು ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತು ಜುಲೈ 20 ರಂದು ಚಿಕ್ಕೋಡಿಯ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲುವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯೆಸಿಸಬೇಕು ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಳಗಾವಿ ವಿಭಾಗಿಯ ಸಂಯೋಜಕರು ಮಹಾಂತೇಶ ಉಳ್ಳಾಗಡ್ಡಿ ಇವರು ತಂಬಾಕಿನ ಕಾನೂನು ಅರಿವು ಕೋಟ್ಪಾ-2003 ರ ಬಗ್ಗೆ ಸೆಕ್ಷನ್-4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಲಾಗಿದೆ ಎಂದರು.

ಈ ಕಾನೂನು ಉಲ್ಲಂಘಿಸಿದ ವ್ಯಕ್ಕಿಗೆ 200 ದಂಡ ವಿಧಿಸಲಾಗುವುದು. ಸೆಕ್ಷನ್-5 ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇದ. ಸೆಕ್ಷನ್-6ರ ಪ್ರಕಾರ ತಂಬಾಕು ಉತ್ಪನ್ನಗಳ ಅಪ್ರಾಪ್ತ ವಯಸ್ಕರಿಗೆ ನಿಯಂತ್ರಣ ಮಾಡುವುದು ಹಾಗೂ ಸೆಕ್ಷನ್ -6(ಬಿ) ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಮೀಟರ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ.

ಸೆಕ್ಷನ್-7 ಪ್ರಕಾರ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ಧಿಷ್ಡ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿ ಕೋಟ್ಪಾ ಕಾಯ್ದೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿಗಳು ಡಾ. ವ್ಹಿ. ವ್ಹಿ ಶಿಂದೆ, ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ಬಿ.ಎನ್ ತುಕ್ಕಾರ, ದಂತ ವೈದ್ಯರಾದ ಡಾ. ದೀಪಾ ಮಗದುಮ, ಎನ್,ಎಸ್,ಎಸ್ ಕೋ-ಆರ್ಡಿನೆರ‍್ಸ್, ರೆಡ್‌ಕ್ರಾಸ್ ಪದಾಧಿಕಾರಿಗಳು, ರೊಟರಿಕ್ಲಬ್ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಕಾರ್ಯಕರ್ತೆಯಾದ ಕವಿತಾ ರಾಜನ್ನವರ ನಿರೂಪಿಸಿದರು. ಜಿಲ್ಲಾ ಸಲಹೆಗಾರರು ಡಾ. ಶ್ವೇತಾ ಪಾಟೀಲ ವಂದಿಸಿರು.////

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button