Kannada NewsKarnataka News

ಪ್ರಮುಖ ಸಂಕ್ಷಿಪ್ತ ಸುದ್ದಿಗಳು

ನೀಟ್ ಮತ್ತು ಜೆ.ಇ.ಇ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ೨೦೧೯-೨೦ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜೆ.ಇ.ಇ ಮತ್ತು ಎಇಇ   ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳಾದ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ ೨೫ ರಂದು ಕೊನೆಯ ದಿನವಾಗಿದೆ.
ತರಬೇತಿಯನ್ನು ಬೆಂಗಳೂರು ನಗರ, ಬೆಳಗಾವಿ, ಕಲಬುರ್ಗಿ, ಮೈಸೂರು, ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನೀಡಲು ಉದ್ದೇಶಿಸಿಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರಥಮ ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವ (ವಿಜ್ಞಾನ ವಿಭಾಗದಲ್ಲಿ) ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್  ಹಾಗೂ ಸಹಾಯವಾಣ ಸಂಖ್ಯೆ ೦೮೫೦೭೭೦೦೦೪ ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ ೧೮ ರಂದು ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ವತಿಯಿಂದ ಅಕ್ಟೋಬರ ೧೮ ರಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೩೦ ಗಂಟೆಗಳ ವರೆಗೆ ಬೆಳಗಾವಿ ಸದಾಶಿವ ನಗರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ., ಐ.ಟಿ.ಐ., ಡಿಪ್ಲೋಮಾ, ಪಿಯುಸಿ, ಬಿ.ಎ., ಬಿ.ಕಾಂ., ಬಿ.ಸಿ.ಎ., ಬಿ.ಎಸ್.ಸಿ., ಬಿ.ಬಿ.ಎ. ಹಾಗೂ ಎಂ.ಬಿ.ಎ. ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಈ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಕಛೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ ೯೭೪೩೧೬೬೧೭೮, ೮೮೬೭೨೬೨೭೫೧ ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

೨೦೧೯-೨೦ನೇ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಎಚ್.ಡಿ ಮಾಡುವ ಹಿಂದುಳಿದ ವರ್ಗಗಳಾದ ಪ್ರವರ್ಗ-೧, ೨ಎ, ೩ಎ, ಹಾಗೂ ೩ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ ೩೦ ಸಂಜೆ ೫ ಗಂಟೆವರೆಗೆ ವಿಸ್ತರಿಸಲಾಗಿದೆ.   ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಿರಿಜನ ಉಪಯೋಜನೆ ಸೌಲಭ್ಯ: ಜವಳಿ ಉದ್ಯಮಿದಾರರಿಗೆ ಕಾರ್ಯಾಗಾರ

೨೦೧೯-೨೦ ನೇ ಸಾಲಿನ ನೂತನ ಜವಳಿ ನೀತಿ ಯೋಜನೆಯಡಿ ಜಿಲ್ಲಾವಾರು ಸಾರ್ವಜನಿಕರಿಗೆ ಇಲಾಖಾ ಯೋಜನೆಗಳ ಕುರಿತು ಮಾಹಿತಿ ನೀಡಲು ಹಾಗೂ ಆಸಕ್ತ ಜವಳಿ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಮೀಸಲು ವಿಧಾನ ಸಭಾ ಕ್ಷೇತ್ರಗಳಲ್ಲಿ ೨ ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಬೆಳಗಾವಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ರಾಯಬಾಗ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೨೧ ರಂದು ರಾಯಬಾಗ ಪಟ್ಟಣದಲ್ಲಿರುವ ಡಾ. ಬಾಬು ಜಗಜೀವನರಾಮ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಜವಳಿ ವಲಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಇಚ್ಛಿಸಿರುವ ರಾಯಬಾಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಸಕ್ತ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ಉದ್ಯಮಬಾಗ್ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ದೂರವಾಣ ಸಂಖ್ಯೆ ೦೮೩೧-೨೪೦೭೨೩೭ ಗೆ ಸಂಪರ್ಕಿಸಬೇಕು ಎಂದು ಬೆಳಗಾವಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ ೨೧ ರಿಂದ ಜಿಲ್ಲಾ ಖಜಾನೆ ಸ್ಥಳಾಂತರ

ಬೆಳಗಾವಿ ಡಿಸಿ ಕಂಪೌಂಡನಲ್ಲಿ ಪ್ರಸುತ್ತ ಕಾರ್ಯನಿರ್ವಹಿಸುತ್ತಿರುವ ಜಂಟಿ ನಿದೇರ್ಶಕರ ಕಾರ್ಯಾಲಯ ಜಿಲ್ಲಾ ಖಜಾನೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಹತ್ತಿರ ವಿನೂತನವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ಅಕ್ಟೋಬರ್ ೨೧ ರಿಂದ ಸ್ಥಳಾಂತರಿಸಲಾಗುತ್ತಿದೆ ಎಂದು ಜಿಲ್ಲಾ ಖಜಾನೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಸಾರ್ವಜನಿಕರು, ಎಲ್ಲ ಬಟವಡೆ ಹಾಗೂ ಹಣ ಸೆಳೆಯುವ ಅಧಿಕಾರಿಗಳು ಖಜಾನೆಯ ವ್ಯವಹಾರಗಳನ್ನು ಸದರಿ ವಿಳಾಸದಲ್ಲಿ ನಡೆಸಬೇಕು ಎಂದು ಜಿಲ್ಲಾ ಖಜಾನೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇನಾ ನೇಮಕಾತಿ ರ‍್ಯಾಲಿ

ಅಕ್ಟೋಬರ್ ೩೦ ರಿಂದ ನವೆಂಬರ್ ೫ ರವರಿಗೆ ಸೇನೆಯ ಹುದ್ದೆಗಳಿಗೆ ಸೇನಾ ನೇಮಕಾತಿ ರ‍್ಯಾಲಿ ಬೆಳಗಾವಿಯ ರಾಷ್ಟ್ರೀಯ ಸೇನಾ ಶಾಲೆಯ ಮೈದಾನದಲ್ಲಿ ನಡೆಯಲಿದೆ.
ಓಟ ಮತ್ತು ದಾಖಲಾತಿಗಳ ಪರಿಶೀಲನೆ ಹಾಗೂ ದೈಹಿಕ ಪರಿಕ್ಷೆ ಅಕ್ಟೋಬರ್ ೩೦ ರಂದು ಮಹಾರಾಷ್ಟ್ರ, ಅಕ್ಟೋಬರ್ ೩೧ ರಂದು ರಾಜಸ್ತಾನ, ನವೆಂಬರ್ ೧ ರಂದು ಗುಜರಾತ, ದಾದ್ರಾ ಮತ್ತು ನಗರ ಹಾವೇಲಿ, ಗೋವಾ, ದಮನ್ ಮತ್ತು ದಿಯು ನವೆಂಬರ್ ೨ ರಂದು ಆಂಧ್ರಪ್ರದೇಶ, ತೆಲಂಗಾಣ, ನವೆಂಬರ್ ೩ ರಂದು ತಮಿಳುನಾಡು, ಲಕ್ಷದ್ವೀಪ ಮತ್ತು ಪಾಂಡಿಚೇರಿ, ನವೆಂಬರ್ ೪ ರಂದು ಕರ್ನಾಟಕ ಮತ್ತು ಕೇರಳದಲ್ಲಿ ನಡೆಯಲಿದೆ.
ನವೆಂಬರ್ ೫ ರಂದು  ಆಂಧ್ರಪ್ರದೇಶ, ತೆಲಂಗಾಣ, ಗುಜರಾತ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ರಾಜಸ್ತಾನ ಮತ್ತು ಕೇಂದ್ರ ಪ್ರದೇಶಗಳಾದ ದಾದ್ರಾ ಮತ್ತು ನಗರ ಹಾವೇಲಿ, ಗೋವಾ, ದಮನ್ ಮತ್ತು ದಿಯು, ಲಕ್ಷದ್ವೀಪ ಮತ್ತು ಪಾಂಡಿಚೇರಿ ಅಭ್ಯರ್ಥಿಗಳಿಗೆ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ.
ನವೆಂಬರ್ ೬ ರಿಂದ ೯ ರವರೆಗೆ ದಾಖಲಾತಿಗಳ ಮರುಪರಿಶೀಲನೆ, ಟ್ರೆಡ್ ಟೆಸ್ಟ್, ಮೆಡ್ ಟೆಸ್ಟ್ ನಡೆಸಲು ಮಂಡಳಿಯು ಅಂತಿಮ ನಿರ್ಧಾರ ಕೈಗೊಂಡಿದೆ.

ಅರ್ಹತೆ:
ಸೈನಿಕ (ಜನರಲ್ ಡ್ಯೂಟಿ)ಹುದ್ದೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ ೪೫ ರಷ್ಟು ಅಂಕ ಪಡೆದು ಪಾಸಾಗಿರಬೇಕು ಮತ್ತು ಪ್ರತಿ ವಿಷಯದಲ್ಲಿ ಶೇ ೩೩ ರಷ್ಟು ಅಂಕ ಪಡಿದಿರಬೇಕು, ಸೈನಿಕ(ಸಿ ಟ್ರೇಡ್ಸ್‌ಮ್ಯಾನ್) ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿರಬೇಕು(ಹೌಸ್ ಕೀಪರ್ ಮತ್ತು ಮೇಸ್ ಕೀಪರ್‌ಗೆ ೮ನೇ ತರಗತಿ ಉತ್ತಿರ್ಣರಾಗಿರಬೇಕು). ಸೈನಿಕ (ಗುಮಾಸ್ತ) ಹುದ್ದೆಗೆ ಪಿ.ಯು.ಸಿ ಯಲ್ಲಿ ಶೆ.೬೦ ರಷ್ಟು ಅಂಕ ಪಡೆದು ಪಾಸಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ದೈಹಿಕ ಪರೀಕ್ಷೆ:
ಎತ್ತರ ೧೬೦ ಸೆ.ಮೀ, ತೂಕ ಕನಿಷ್ಠ ೫೦ ಕೆ.ಜಿ, ಎದೆ ಸುತ್ತಳತೆ ಅಳತೆ ೭೭.೫ ಸೆ.ಮೀ ದೇಹಾರ್ಡ್ಯತೆ ಹೊಂದಿರಬೇಕು. ವಯಸ್ಸು ನೇಮಕಾತಿ ದಿನದಂದು ೧೮ ರಿಂದ ೪೨ ವರ್ಷ ತುಂಬಿರಬೇಕು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಸೇನಾ ಪೂರ್ಟಲ್ವೆ ವೆಬ್ ಸೈಟ್ ಮೂಲಕ
ಮಾಹಿತಿ ಪಡೆಯಬಹುದು.

  ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ತರಬೇತಿ

ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯೆಸಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿದೇಶಕರಾದ ರಾಜಶೇಖರ ಪಟ್ಟಣಶಟ್ಟಿ ಅವರು ತಿಳಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ಸರಕಾರಿ ಸರ್ದಾರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ (ಅ.೧೪) ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ನಡೆದ ತಂಬಾಕು ಹಾಗೂ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಹಾಗೂ ಕೊಟ್ಪಾ ೨೦೦೩ರ ಕಾಯ್ದೆಯ ಕುರಿತು ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನುಷ್ಯನ ಆರೋಗ್ಯದ ಮೇಲೆ ಹಲವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಅಂಶಗಳಿರುತ್ತವೆ. ಇತ್ತಚಿನ ದಿನಗಳಲ್ಲಿ ಯುವ ಜನಾಂಗದವರಲ್ಲಿ ತಂಬಾಕು ಸೇವನೆ ಹೆಚ್ಚಾಗುತ್ತಿದ್ದು, ಇದರಿಂದ ಯುವ ಜನರಲ್ಲಿ ಬಾಯಿ ಕ್ಯಾನ್ಸರಿನ ರೋಗಗಳು ಹೆಚ್ಚಾಗುತ್ತಿದ್ದು. ಮತ್ತು ಆರೋಗ್ಯದ ಮೇಲೆ ತಂಬಾಕು ಪರಿಣಾಮವಾಗಿ ದೇಶದ ಆರ್ಥಿಕ ಪ್ರಗತಿ ಕುಂಠಿತವಾಗುತ್ತದೆ. ತಂಬಾಕು ಹಾಗೂ ತಂಬಾಕು ಉತ್ಪನ್ನಗಳಿಂದ ಆಗುವ ದುಷ್ಪರಿಣಾಮದ ಕುರಿತು ತಿಳಿಸಿದರು.
ಬೆಳಗಾವಿ ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡಬಾರದು ತಮ್ಮ ಕಾಲೇಜಿನ್ನು ತಂಬಾಕು ಮುಕ್ತ ಕಾಲೇಜುಗಳನ್ನಾಗಿ ಘೋಶಿಸಲು ಸೂಚಿಸಿದರು ಮತ್ತು ಇಂದಿನ ಯುವ ಪೀಳಿಗೆ ತಂಬಾಕು ಸೇವನೆಯಿಂದ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್, ಜಿ ಕಾಡನ್ನವರು ಇವರು ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲುವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯೆಸಿಸಬೇಕು ಎಂದು ತಿಳಿಸಿದರು
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಳಗಾವಿ ವಿಭಾಗಿಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ ಅವರು ಮಾತನಾಡಿದರು ತಂಬಾಕಿನ ಕಾನೂನು ಅರಿವು ಕೋಟ್ಪಾ-೨೦೦೩ ರ ಬಗ್ಗೆ ಸೆಕ್ಷನ್-೪ ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಲಾಗಿದೆ.
ಈ ಕಾನೂನು ಉಲ್ಲಂಘಿಸಿದ ವ್ಯಕ್ಕಿಗೆ ರೂ.೨೦೦ ದಂಡ ವಿಧಿಸಲಾಗುವುದು. ಸೆಕ್ಷನ್-೫ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇದ. ಸೆಕ್ಷನ್-೬ರ ಪ್ರಕಾರ ತಂಬಾಕು ಉತ್ಪನ್ನಗಳ ಅಪ್ರಾಪ್ತ ವಯಸ್ಕರಿಗೆ ನಿಯಂತ್ರಣ ಮಾಡುವುದು ಹಾಗೂ ಸೆಕ್ಷನ್ -೬(ಬಿ) ಪ್ರಕಾರ ಶಿಕ್ಷಣ ಸಂಸ್ಥೆಗಳ ೧೦೦ ಮೀಟರ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್-೭ ಪ್ರಕಾರ ಸಿಗರೇಟ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ಧಿಷ್ಡ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿ ಕೋಟ್ಪಾ ಕಾಯ್ದೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಸಲಹೆಗಾರರು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಅಧಿಕಾರಿ ಡಾ. ಶ್ವೇತಾ ಪಾಟೀಲ ಅವರು ಮಾತನಾಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಕೋಟ್ಪಾ ಸೆಕ್ಷನ್-೪ರ ನಾಮಫಲಕವನ್ನು ಶಾಲಾ, ಕಾಲೇಜು ಪ್ರವೇಶದ್ವಾರದಲ್ಲಿ ಅಳವಡಿಸಿದೆಯೇ, ಕೋಟ್ಪಾ ಸೆಕ್ಷನ್ -೬ ಬಿ (ಶಾಲೆಯ, ಕಾಲೇಜು ಆವರಣದ ಸುತ್ತ ೧೦೦ ಗಜ ಅಂತರದಲ್ಲಿ ತಂಬಾಕು ಪದಾರ್ಥಗಳ ಮಾರಾಟ ಮಾಡಲಾಗುತ್ತಿದೆಯೇ ಶಾಲಾ, ಕಾಲೇಜು ತಂಬಾಕು ನಿಯಂತ್ರಣ ಸಮಿತಿ ರಚಿಸಲಾಗಿದೆಯೇ, ಕೋಟ್ಪಾ ಕಾಯ್ದೆ-೨೦೦೩ರ ಕೈಪಿಡಿ ಶಾಲೆ, ಕಾಲೇಜಿನಲ್ಲಿ ಲಭ್ಯವಿದೆಯೇ, ಶಾಲಾ, ಕಾಲೇಜು ಆವರಣದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಆಗುತ್ತಿದೆಯೇ (ಶಿಕ್ಷಕರು, ವಿದ್ಯಾಥಿಗಳು), ಶಾಲೆ, ಕಾಲೇಜಿನಲ್ಲಿ ತಂಬಾಕು ಉತ್ಪನ್ನಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿ ಈ ಎಲ್ಲ ಸೂಚನೆಗಳನ್ನು ಒಳಗೊಂಡಿದ್ದರೆ ಅವುಗಳನ್ನು ತಮಬಾಕು ಮುಕ್ತ ಕಾಲೇಜುಗಳನ್ನಾಗಿ ಘೋಶಿಸಲು ಕರೆ ನೀಡಿದರು.
ಕಾರ್ಯಾಗಾರದಲ್ಲಿ ಎಸ್.ಜಿ. ಕಾಡನ್ನವರ, ಜಿಲ್ಲಾ ಸಮೀಕ್ಷಣಾಧಿಕಾರಿಗಳಾದ ಡಾ. ಬಿ.ಎನ್. ತುಕ್ಕಾರ ಬೆಳಗಾವಿ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಜರಿದ್ದರು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button