ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ ಆರಂಭವಾಗಿದೆ. ಆಂತರಿಕ ಭಿನ್ನಮತ ಶಮನ ಹಾಗೂ ಪವರ್ ಶೇರಿಂಗ್ ಚರ್ಚೆ ಹಿನ್ನೆಲೆ ಇವತ್ತಿನ ಸಭೆ ಮಹತ್ವದ ಪಡೆದಿದೆ.
ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಬೆಂಗಳೂರು ತಲುಪಿದ್ದು ಸರಣಿ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11ಕ್ಕೆ ಕೆಪಿಸಿಸಿ ವಿಸ್ಕೃತ ಸರ್ವ ಸದಸ್ಯರ ಸಭೆ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಂಜೆ 6ಕ್ಕೆ ಸಿಎಂ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಬೆಳಗಾವಿಯಲ್ಲಿ ಜ.21ರಂದು ನಡೆಯಲಿರುವ ಎಐಸಿಸಿ ಸಮಾವೇಶದ ಸಿದ್ದತೆಯ ಹಿನ್ನೆಲೆಯಲ್ಲಿ ಸರಣಿ ಸಭೆಗಳು ನಡೆಯಲಿವೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಸಂಸದರು, ಮಾಜಿ ಸಂಸದರು, ಶಾಸಕರು, ಸಚಿವರು, ಮಾಜಿ ಸಚಿವರು, ವಿಧಾನಪರಿಷತ್ ಸದಸ್ಯರು, 2023ರ ಚುನಾವಣೆಯ ಪರಾಜಿತ ಕೈ ಅಭ್ಯರ್ಥಿಗಳು, 2024ರ ಲೋಕಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ನಿಗಮ ಮಂಡಳಿಗಳ ಅಧ್ಯಕ್ಷರು, ಮುಂಚೂಣಿ ಘಟಕ, ವಿವಿಧ ಸೆಲ್‌ಗಳ ರಾಜ್ಯಾಧ್ಯಕ್ಷರು ಹೀಗೆ ಸಾಕಷ್ಟು ಜನರು ಕೆಪಿಸಿಸಿ ವಿಸ್ಕೃತ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಭೆಯೂ ಮಹತ್ವ ಪಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ