ಜುಲೈ 29 ರಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಲೋಕಾಯುಕ್ತ ಪೊಲೀಸರಿಂದ ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ದೂರು, ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಛೇರಿಗಳಲ್ಲಿ ಅಧೀಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಶಿವಕುಮಾರ. ಆರ್ ರವರು ತಿಳಿಸಿದ್ದಾರೆ.
ಈ ನಿಮಿತ್ಯವಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ 29 ರಿಂದ 31 ರ ವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜುಲೈ 29 ರಂದು ಆರ್.ಆರ್.ಅಂಬಡಗಟ್ಟಿ, ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಬೆಳಗಾವಿ ರವರು ಖಾನಾಪೂರ ತಾಲೂಕಿನ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ, ಪಿ.ಆರ್ ಧಬಾಲಿ, ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕರ್ನಾಟಕ ಲೋಕಾಯುಕ್ತ ಬೆಳಗಾವಿ ರವರು ಚಿಕ್ಕೋಡಿ ತಾಲೂಕಿನ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 04 ಗಂಟೆವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಜುಲೈ 30 ರಂದು ಪಿ.ಆರ್ ಧಬಾಲಿ, ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕರ್ನಾಟಕ ಲೋಕಾಯುಕ್ತ ಬೆಳಗಾವಿ ರವರು ರಾಯಬಾಗ ತಾಲೂಕಿನ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 04 ಗಂಟೆವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಜುಲೈ 31 ರಂದು ಆರ್.ಆರ್.ಅಂಬಡಗಟ್ಟಿ, ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಬೆಳಗಾವಿ ರವರು ಹುಕ್ಕೇರಿ ತಾಲೂಕಿನ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಪಿ.ಆರ್ ಧಬಾಲಿ, ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕರ್ನಾಟಕ ಲೋಕಾಯುಕ್ತ ಬೆಳಗಾವಿ ರವರು ಬೈಲಹೊಂಗಲ ತಾಲೂಕಿನ ಲೊಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 04 ಗಂಟೆವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಳಿಗಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬೆಳಗಾವಿ ಕಛೇರಿ ದೂರವಾಣಿ ಸಂಖ್ಯೆ:0831-2421550 ಮತ್ತು 0831-2421922 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪಿಓಪಿ ಗಣೇಶ ತಯಾರಿಕೆ ನಿಷೇಧ: ಜಿಲ್ಲಾಧಿಕಾರಿ ಡಾ. ಎಸ್.ಬಿ ಬೊಮ್ಮನಹಳ್ಳಿ
ಪ್ರಗತಿವಾಹಿನಿ ಸುದ್ದಿ -ಬೆಳಗಾವಿ : ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಬಣ್ಣ ಲೇಪಿತವಾದಂತಹ ವಿಗ್ರಹಗಳ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಯಾವುದೇ ಜಲ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ಹೇಳಿದ್ದಾರೆ.
ರಾಸಾಯನಿಕಯುಕ್ತ ಬಣ್ಣಗಳನ್ನು ಉಪಯೋಗಿಸುವ ಬದಲು ಜೈವಿಕ ಬಣ್ಣಗಳನ್ನು ಅಥವಾ ರಾಸಾಯನಿಕಗಳನ್ನು ಬಳಸದೇ ಮಾಡಿದ ಹಾಗೂ ನೀರಿನಲ್ಲಿ ಕರಗುವ ಬಣ್ಣಗಳನ್ನು ಉಪಯೋಗಿಸಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪರಿಸರವನ್ನು ಸಂರಕ್ಷಿಸುವ ರೀತಿಯಲ್ಲಿ ಹಬ್ಬವನ್ನು ಆಚರಿಸಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಪ್ಲಾಸ್ಟಿರ್ ಆಫ್ ಪ್ಯಾರಿಸ್‌ನಿಂದ, ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ(ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974ರ ಅನ್ವಯ ನಿಷೇಧಿಸಲಾಗಿದೆ.
ಈ ವಿಷಯವನ್ನು ಈಗಾಗಲೇ ಎರಡು ವರ್ಷಗಳಿಂದ ಗಣೇಶ ವಿಗ್ರಹಗಳ ತಯಾರಿಕರಿಗೆ ಹಾಗೂ ಮಾರಾಟಗಾರರಿಗೆ ಮತ್ತು ಬೆಳಗಾವಿ ಗಣೇಶ ಮಹಾಮಂಡಳಗಳ ಪದಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಮಗ್ಗಗಳ ನೇಕಾರರು ಇಯರ್ ಪ್ಲಗ್ ಮತ್ತು ಇಯರ್ ಮಫ್ಸ್ ಅಳವಡಿಸಲು ಸೂಚನೆ
ಬೆಂಗಳೂರು ಕೈಮಗ್ಗ ಮತ್ತು ಜವಳಿ ಇಲಾಖೆ ಜವಳಿ ಆಯುಕ್ತರು ಹಾಗೂ ನಿರ್ದೇಶಕರು ನೇಕಾರರ ಆರೋಗ್ಯದ ಹಿತದೃಷ್ಟಿಯಿಂದ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿದ್ಯುತ್ ಸಹಾಯಧನವನ್ನು ಪಡೆಯುತ್ತಿರುವ ರಾಜ್ಯದ ಎಲ್ಲಾ ವಿದ್ಯುತ್ ಮಗ್ಗ ಘಟಕಗಳಲ್ಲಿ ಕಾರ್ಯನಿರ್ವಹಿಸುವ ನೇಕಾರರ ಕಿವಿಗೆ ಬೀಳುವ ಶಬ್ದವನ್ನು ಕಡಿಮೆಗೊಳಿಸಲು Ear plugs ಅಥವಾ Ear Muffs ಗಳನ್ನು ಅಳವಡಿಸಲು ಸೂಚಿಸಿದ್ದಾರೆ.
ಜಿಲ್ಲೆಯಲ್ಲಿರುವ ಎಲ್ಲಾ ವಿದ್ಯುತ್ ಮಗ್ಗಗಳ ಘಟಕಗಳ ಮಾಲೀಕರು ತಮ್ಮ ಘಟಕದಲ್ಲಿ ಕೆಲಸ ಮಾಡುವ ನೇಕಾರರಿಗೆ Ear plugs ಅಥವಾ Ear Muffs ಗಳನ್ನು ಒಂದು ತಿಂಗಳ ಒಳಗಾಗಿ ಕಡ್ಡಾಯವಾಗಿ ಒದಗಿಸಲು ತಿಳಿಸಿದ್ದಾರೆ.
ಈ ಬಗ್ಗೆ ಕ್ರಮವಹಿಸಿದ ಘಟಕಗಳ ವಿರುದ್ದ ವರದಿ ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಗಾರ ಹೆಸ್ಕಾಂ: ಜು. 29 ರಂದು ವಿದ್ಯುತ್ ಸುರಕ್ಷರಾ ಜಾಗೃತಿ ಕಾರ್ಯಾಕ್ರಮ
ಉಗಾರ ಉಪವಿಭಾಗದ ಕಕ್ಷೆಯಲ್ಲಿ ಬರುವ ಎಲ್ಲ ಗ್ರಾಮ/ಪಟ್ಟಣ ಪಂಚಾಯತಗಳಲ್ಲಿ ಗ್ರಾಹಕರಿಗೆ ವಿದ್ಯುತ್ ಉಳಿತಾಯ, ಬಳಕೆ ಮತ್ತು ಸುರಕ್ಷತಾ ಕ್ರಮಗಳ ಜಾಗೃತಿ ಮೂಡಿಸುವ ಬಗ್ಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ವಿದ್ಯುತ್ ಸುರಕ್ಷತಾ ಜಾಗೃತಿ ಕಾರ್ಯಾಕ್ರಮವನ್ನು ಜುಲೈ 29 ರಂದು ಆಯೋಜಿಸಲಾಗಿದೆ ಎಂದು ಹು.ವಿ.ಸ.ಕಂ.ನಿ,ಉಗಾರ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡೆಂಗಿ ಮಾಸಾಚರಣೆ ಅಂಗವಾಗಿ ಬೃಹತ್ ಜಾಥಾ ಕಾರ್ಯಕ್ರಮ
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 26 ರಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಂಟಮುರಿ ಕಾಲೋನಿಯಲ್ಲಿ ಡೆಂಗಿ ವಿರೋಧಿ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಜಾಥಾ ಕಾರ್ಯಕ್ರಮಕ್ಕೆ ಅಶೋಕ ದುಡಗುಂಟಿ ಆಯುಕ್ತರು ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ಡಾ.ಶಶಿಕಾಂತ ವ್ಹಿ ಮುನ್ಯಾಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೆಳಗಾವಿ ಇವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಶಶಿಕಾಂತ ವ್ಹಿ ಮುನ್ಯಾಳ ಜಿಲ್ಲಾ ಆರೋಗ್ಯ ವiತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೆಳಗಾವಿ ಇವರು ಮಾತನಾಡಿ ಡೆಂಗಿ ನಿಯಂತ್ರಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಯಾವದೇ ಜ್ವರ ಇದ್ದರೂ ಕೂಡಾ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ದೃಡಪಟ್ಟಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯುವದರಿಂದ ಸಾಂಕ್ರಾಮಿಕ ರೋಗಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟ್ಟಿಕೊಟ್ಟು ಲಾರ್ವಾ ಸಮೀಕ್ಷೆ ಮಾಡಿ ಸಾರ್ವಜನಿಕರಿಗೆ ಡೆಂಗಿ ರೋಗದ ಲಕ್ಷಣಗಳು, ಮುಂಜಾಗ್ರತಾ ಕ್ರಮ ಹಾಗೂ ನಿಯಂತ್ರಣದ ಕುರಿತು ಅರಿವು ಮೂಡಿಸುತ್ತಿದ್ದಾರೆಂದು ತಿಳಿಸಿ ಡೆಂಗಿ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದ್ದು ಸಾರ್ವಜನಿಕರು ಸಹ ಆರೋಗ್ಯ ಇಲಾಖೆಯ ಜೊತೆ ಸಹಕರಿಸುವಂತೆ ಮನವಿ ಮಾಡಿದರು.
ಡಾ.ಎಂ.ಎಸ್.ಪಲ್ಲೇದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಮಾತನಾಡಿ ಡೆಂಗಿ ಜ್ವರ ವೈರಸ ನಿಂದ ಉಂಟಾಗುವ ಕಾಯಿಲೆಯಾಗಿದು,್ದ ಇದು ಸೋಂಕು ಹೊಂದಿದ ಈಡಿಸ್ ಇಜಿಪ್ಟ ಎಂಬ ಸೊಳ್ಳೆ ಕಚ್ಚುವದರಿಂದ ಒಬ್ಬರಿಂದ ಮತ್ತೋಬ್ಬರಿಗೆ ಹರಡುತ್ತದೆ. ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರಿತ ತಲೆನೋವು ಕಣ್ಣುಗಳ ಹಿಂಬಾಗ, ಮಾಂಸಖಂಡ ಹಾಗೂ ಕೀಲುಗಳಲ್ಲಿ ವಿಪರಿತ ನೋವು ಕಾಣಿಸಿಕೊಳ್ಳುವುದು. ರೋಗದ ಲಕ್ಷಣವಾಗಿದೆ ಎಂದರು.
ಮುಂಜಾಗ್ರತ ಕ್ರಮವಾಗಿ ಎಲ್ಲ ನೀರಿನ ತೊಟ್ಟಿ, ಡ್ರಮ್ಮು, ಬ್ಯಾರಲ್, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡಿ ಒಣಗಿಸಿ ಮತ್ತೆ ಬರ್ತಿಮಾಡಿಕೊಳ್ಳಬೇಕೆಂದರು. ಕಳೆದ ವರ್ಷಕ್ಕೆ ಹೊಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ಇಳಿಮುಖವಾಗಿವೆ ಆದರೆ ಇನ್ನೂ ಕೂಡಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ ಇದರ ಕುರಿತು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಹಾಗೂ ತಿಳುವಳಿಕೆ ನೀಡಲಾಗುತ್ತಿದೆ ಎಂದರು.
ಜನವರಿ 2019 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 246 ರಕ್ತ ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 26 ದೃಡಪಟ್ಟಿರುತ್ತವೆ. ಇವುಗಳಲ್ಲಿ ಬೆಳಗಾವಿ ನಗರ, ಚಿಕ್ಕೋಡಿ ಹಾಗೂ ಅಥಣಿಯಲ್ಲಿ ಹೆಚ್ಚನ ಪ್ರಕರಣಗಳು ಕಂಡು ಬಂದಿರುತ್ತವೆ. ಅದರಂತೆ ಬಿಮ್ಸ ಆಸ್ಪತ್ರೆ ಬೆಳಗಾವಿಯಲ್ಲಿ 167 ಪ್ರಕರಣಗಳು ದೃಡಪಟ್ಟಿರುತ್ತವೆ ಎಂದರು.
ಜಾಥಾ ಕಾರ್ಯಕ್ರಮದಲ್ಲಿ ಮಾಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳಾದ ಡಾ.ಶಶಿಧರ ನಾಡಗೌಡ, ಜಿಲ್ಲಾ ಸವೇಕ್ಷಣಾಧಿಕಾರಿಗಳಾದ ಡಾ.ಬಿ.ಎನ.ತುಕ್ಕಾರ, ಜಿಲ್ಲಾ ಕುಟುಂಬ ಕಲ್ಯಾಣಿ ಅಧಿಕಾರಿಗಳಾದ ಡಾ.ಸಾವಿತ್ರಿ ಭೆಂಡಿಗೇರಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಅನಿಲ ಕೊರಬು, ತಾಲೂಕಾ ಆರೋಗ್ಯಾಧಿಗಳಾದ ಡಾ. ಸಂಜಯ ಡುಮ್ಮಗೋಳ, ಕೀಟಶಾಸ್ತ್ರಜ್ಞರು ಗಣಪತಿ ಬಾರ್ಕಿ, ಕೀಟಶಾಸ್ತ್ರಜ್ಞರು ಶ್ರೀಮತಿ ಶಿಲ್ಪಾ ಹಳೇಮನಿ, ಖಾತ್ರಿ ಗುಣಮಟ್ಟ ವಿಭಾಗ, ಜಿಲ್ಲಾ ಸಲಹೆಗಾರರಾದ ಡಾ.ಶಿವಲೀಲಾ ಶಿರೋಳ, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಪಿ ಯಲಿಗಾರ, ಅಂಗನವಾಡಿ ಕಾರ್ಯಕರ್ತೆಯರು, ಮಹಾನಗರ ಪಾಲಿಕೆ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ಜಿಲ್ಲಾ ಖಜಾನೆ ಜಂಟಿ ನಿರ್ದೇಶಕರಾಗಿ ಸುರೇಶ ಹಳ್ಯಾಳ ಅಧಿಕಾರ ಸ್ವೀಕಾರ
ಬೆಳಗಾವಿ ಜಿಲ್ಲಾ ಖಜಾನೆ ಜಂಟಿ ನಿರ್ದೇಶಕರಾಗಿ ಸುರೇಶ ಹಳ್ಯಾಳ ಅವರು ಜುಲೈ 25 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಪೂರ್ವದಲ್ಲಿ ಜಿಲ್ಲಾ ಖಜಾನೆ, ಗದಗ ಕಚೇರಿಯಲ್ಲಿ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಪದೋನ್ನತಿ ಹೊಂದಿ ಜಿಲ್ಲಾ ಖಜಾನೆ ಬೆಳಗಾವಿ ಕಚೇರಿಯ ಜಂಟಿ ನಿರ್ದೇಶಕರಾಗಿ ಕಾರ್ಯಭಾರವನ್ನು ವಹಿಸಿಕೊಂಡಿದ್ದಾರೆ.
ಜಿಲ್ಲಾ ಖಜಾನೆಗೆ ಸಂಬಂಧಿಸಿದ ವಿಷಯಗಳಿಗಾಗಿ ಬೆಳಗಾವಿ ಜಿಲ್ಲಾ ಖಜಾನೆ ಜಂಟಿ ನಿರ್ದೇಶಕರಾದ ಸುರೇಶ ಹಳ್ಯಾಳ ದೂರವಾಣಿ ಸಂಖ್ಯೆ 9008532068 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಜುಲೈ 30 ರಂದು ಗ್ರಾಮ ಸಭೆ
ಸುಳೇಭಾವಿ ಗ್ರಾಮಪಂಚಾಯತಿಯ 2019-20ನೇ ಸಾಲಿನ ಒಂದನೆ ಹಂತದ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಜುಲೈ 30 ರಂದು ಬೆಳಿಗ್ಗೆ 10 ಗಂಟೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಸುಳೇಭಾವಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ