Kannada NewsKarnataka News

ಬೆಳಗಾವಿಯಲ್ಲಿಂದು ಮತ್ತೆ 4 ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಒಟ್ಟು ಸಂಖ್ಯೆ 14 ಕ್ಕೆ ಏರಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಬೆಳಗಾವಿ ಜಿಲ್ಲೆಯಲ್ಲಿ ಇಂದು ಭಾನುವಾರ ಮತ್ತೆ ನಾಲ್ಕು ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಈ ನಾಲ್ಕು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 14 ಕ್ಕೆ ಏರಿದಂತಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ(ಏ.೧೨) ಬೆಳಗ್ಗೆಯ ಪತ್ರಿಕಾ ಪ್ರಕಟಣೆಯ ಪ್ರಕಾರ ನಾಲ್ಕು ಜನರಲ್ಲಿ ಸೋಂಕು ಪತ್ತೆಯಾಗಿದೆ.
 ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ೧೯ ವರ್ಷದ ವ್ಯಕ್ತಿ (ಪಿ-೨೨೩); ೫೫ ವರ್ಷದ ವ್ಯಕ್ತಿ (ಪಿ-೨೨೫);  ೨೫ ವರ್ಷದ ಯುವಕ(ಪಿ-೨೨೬)ನಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರೂ ಕೂಡ ಈಗಾಗಲೇ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿ-೧೫೦ ಜತೆ ಸಂಪರ್ಕಕ್ಕೆ ಬಂದಿದ್ದರು.
ಅದೇ ರೀತಿ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೩೮ ವರ್ಷದ ವ್ಯಕ್ತಿ (ಪಿ-೨೨೪)ಯಲ್ಲೂ ಸೋಂಕು ದೃಢಪಟ್ಟಿದ್ದು, ಇವರು ಪಿ-೧೨೮ ಜತೆ ಸಂಪರ್ಕಕ್ಕೆ ಬಂದಿದ್ದರು ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button