ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ, ಆ.23ರಿಂದ ಪ್ರೌಢ ಶಾಲೆ ಆರಂಭ; ರಾತ್ರಿ ಕರ್ಫ್ಯೂ ಅವಧಿ ವಿಸ್ತರಣೆ – ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಯಾಗಲಿದೆ.
ಆ. 23ರಿಂದ 9ರಿಂದ 12ನೇ ತರಗತಿಯವರೆಗೆ ಶಾಲೆ ಆರಂಭವಾಗಲಿದೆ. ರಾತ್ರಿ ಕರ್ಫ್ಯೂವನ್ನು ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ.
ತಜ್ಞರ ಜೊತೆಗಿನ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದರು.
ಶಾಲೆಗಳನ್ನು ಆರಂಭಿಸುವ ಕುರಿತಂತೆ ಚರ್ಚಿಸಲಾಗಿದೆ. ಆ. 23ರಿಂದ ದಿನಬಿಟ್ಟು ದಿನ ಬ್ಯಾಚ್ ಆಧಾರದ ಮೇಲೆ 9ರಿಂದ 12ನೇ ತರಗತಿಯವರೆಗಿನ ಕ್ಲಾಸ್ ನಡೆಯುತ್ತದೆ. ಪ್ರಾಥಮಿಕ ಶಾಲೆ ಆರಂಭದ ಕುರಿತು ಆಗಸ್ಟ್ ಅಂತ್ಯದ ವೇಳೆಗೆ ನಿರ್ಧರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.
ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಇರಲಿದೆ. ರಾತ್ರಿ 9ರಿಂದಲೇ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಾಗಲಿದೆ.
ಕೋವಿಡ್ ಟಾಸ್ಕ್ ಫೋರ್ಸ ನಾಳೆ ಅಥವಾ ನಾಡಿದ್ದು ರಚನೆಯಾಗಲಿದೆ. ರಾಜ್ಯದ ನೂತನ ಸಚಿವರಿಗೆ ಇಂದೇ ಖಾತೆಗಳನ್ನು ಹಂಚಲಾಗುವುದು ಎಂದೂ ಸಿಎಂ ತಿಳಿಸಿದರು.
ರಮೇಶ ಜಾರಕಿಹೊಳಿ ನಿವಾಸದಲ್ಲಿ ಅತೃಪ್ತರ ಸಭೆ? ಮತ್ತೆ ಶುರುವಾಯ್ತಾ ಭಿನ್ನಮತೀಯ ಚಟುವಟಿಕೆ?