*ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಹಿನ್ನೆಲೆ: ಮಧ್ಯ ಮಾರಾಟ ನಿಷೇದಾಜ್ಞೆ ಜಾರಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸೆ.7 ರಿಂದ ಸೆ.17 ರವರೆಗೆ ಗಣೇಶ ಹಬ್ಬ ಹಾಗೂ ಸೆ. 16 ರಂದು ಈದ್ ಮಿಲಾದ್ ಆಚರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಬೆಳಗಾವಿ ಜಿಲ್ಲೆಯಾದ್ಯಂತ (ಬೆಳಗಾವಿ ತಾಲೂಕು ಹೊರತುಪಡಿಸಿ) ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ಪ್ರದೇಶಗಳಲ್ಲಿ ಮದ್ಯ/ಬಾರ್ ಅಂಗಡಿಗಳನ್ನು ಬಂದ್ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಪ್ರತಿಬಂಧಕ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 32 ರನ್ವಯ ಶಿಕ್ಷೆಗೆ ಒಳಪಡುವರು. ಅಬಕಾರಿ ಜಂಟಿ ಆಯುಕ್ತರು, ಅಬಕಾರಿ ಉಪ ಆಯುಕ್ತರು, ಅಬಕಾರಿ ಅಧೀಕ್ಷಕರು, ಮತ್ತು ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ ದಕ್ಷಿಣ ಜಿಲ್ಲೆ/ ಬೆಳಗಾವಿ ಉತ್ತರ ಜಿಲ್ಲೆ ಇವರುಗಳು ಸದರಿ ದಿನಗಳಂದು ಮದ್ಯ ಮಾರಾಟ ಆಗದಂತೆ ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಒಬ್ಬ ವ್ಯಕ್ತಿ ಹೊಂದಬೇಕಾದ ಮದ್ಯ ಸಂಗ್ರಹಣೆ ಹೊರ್ತು ಪಡಿಸಿ ಹೆಚ್ಚಿನ ಸಂಗ್ರಹಣೆ ಇರದಂತೆ ಹಾಗೂ ಲೈಸನ್ಸ್ ಇಲ್ಲದ ಆವರಣಗಳಲ್ಲಿ ಸಂಗ್ರಹಣೆ ಇಡದಂತೆ ಸೂಕ್ತ ಕ್ರಮ ಜರುಗಿಸಲು ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ